ಮತ್ತಾಯ 13:21 - ಕನ್ನಡ ಸತ್ಯವೇದವು J.V. (BSI)21 ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿ ಬೀಳುತ್ತಾನೆ; ಇವನೇ ಬೀಜ ಬಿದ್ದ ಬಂಡೆಯ ನೆಲವಾಗಿರುವವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಖರೆ ತ್ಯಾ ಗೊಸ್ಟಿಯಾ ತೆಂಚ್ಯಾ ಮನಾತ್ ಎಗ್ದಮ್ ಭುತ್ತುರ್ ಗೆಲ್ಲ್ಯಾ ರ್‍ಹಾಯ್ನಾ, ಅಶೆ ತೆನಿ ಲೈ ಎಳ್ ದೆವಾಚ್ಯಾ ಗೊಸ್ಟಿ ಸರ್ಕೆ ಚಲಿನ್ಯಾತ್. ದೆವಾಚ್ಯಾ ಬರ್‍ಯಾ ಖಬ್ರೆಸಾಟ್ನಿ ಕಸ್ಟ್ ನಾ ತರ್ ತರಾಸ್ ತೆಂಕಾ ಯೆಲೊ ತರ್, ಎಗ್ದಮ್ ತೆನಿ ತೆ ಸೊಡುನ್ ಸೊಡ್ತ್ಯಾತ್. ಅಧ್ಯಾಯವನ್ನು ನೋಡಿ |
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.