Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:22 - ಕನ್ನಡ ಸತ್ಯವೇದವು J.V. (BSI)

22 ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಕಾಟ್ಯಾಂಚ್ಯಾ ಝಿಳಿತ್ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚೆ ಉತರ್ ಆಯಿಕ್ತ್ಯಾತ್; ಖರೆ ಹ್ಯಾ ಬಾಳ್ವಿಚ್ಯಾ ಯವ್ಜನ್ಯಾ ಅನಿ ಸಾವ್ಕಾರ್ಕಿ ಜೊಡ್ತಲಿ ಆಶಾ ದೆವಾಚ್ಯಾ ಬರ್‍ಯಾ ಖಬ್ರೆಕ್ ದಡ್ಪುನ್ ಧರ್‍ತಾ, ಅನಿ ತೆಂಕಾ ಫಳ್ ದಿವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:22
42 ತಿಳಿವುಗಳ ಹೋಲಿಕೆ  

ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ಬೇರೆ ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವಮಾನದಲ್ಲಿ ಆಗುವ ಚಿಂತೆ ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಮಾಗಿಸುವದಿಲ್ಲ; ಇವರೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವರು.


ಜನರಿಗೆ - ಎಲ್ಲಾ ಲೋಭಕ್ಕೂ ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವದಿಲ್ಲ ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು;


ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ.


ಮತ್ತೆ ಕೆಲವು ಬೀಜ ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.


ತನಗೋಸ್ಕರ ದ್ರವ್ಯವನ್ನಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ ಅಂದನು.


ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ ಎಂದು ಹೇಳುವರು.


ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ಯೆಹೋವನು ಯೆಹೂದದವರಿಗೂ ಯೆರೂಸಲೇವಿುನವರಿಗೂ ಹೀಗೆ ಹೇಳುತ್ತಾನೆ - ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.


ಧನವನ್ನೇ ನಂಬಿದವನು ಬಿದ್ದು ಹೋಗುವನು; ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.


ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಸೊಕ್ಕಿರಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮದಾನವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು ಅವರ ಮುಂದಿಟ್ಟು -


ಎರಡನೆಯವನಿಲ್ಲದೆ ಒಬ್ಬೊಂಟಿಗನೊಬ್ಬನಿದ್ದಾನೆ; ಅವನಿಗೆ ಅಣ್ಣತಮ್ಮಂದಿರೂ ಇಲ್ಲ, ಮಕ್ಕಳೂ ಇಲ್ಲ; ಆದರೂ ಅವನ ಶ್ರಮೆಗೆ ಪಾರವಿಲ್ಲ, ಧನದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಲೇ ಇದ್ದೇನೆ ಅಂದುಕೊಳ್ಳುವನು. ಇದೂ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅದು ಅವನಿಗೆ ಕ್ಷವಿುಸಲ್ಪಡುವದು; ಪವಿತ್ರಾತ್ಮನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಇಹದಲ್ಲಾಗಲಿ ಪರದಲ್ಲಾಗಲಿ ಕ್ಷವಿುಸಲ್ಪಡುವದಿಲ್ಲ.


ಅದನ್ನು ಬಿತ್ತುವ ವೈರಿ ಅಂದರೆ ಸೈತಾನನು; ಸುಗ್ಗೀಕಾಲ ಅಂದರೆ ಯುಗದ ಸಮಾಪ್ತಿ; ಕೊಯ್ಯುವವರು ಅಂದರೆ ದೇವದೂತರು.


ಹೀಗಿರಲಾಗಿ ಹೇಗೆ ಹಣಜಿಯನ್ನು ಆರಿಸಿತೆಗೆದು ಸುಟ್ಟುಬಿಡುತ್ತಾರೋ, ಹಾಗೆಯೇ ಯುಗದ ಸಮಾಪ್ತಿಯಲ್ಲಿ ನಡೆಯುವದು.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ಜ್ಞಾನಿಯು ಎಲ್ಲಿ? ಶಾಸ್ತ್ರಿಯೆಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕಜ್ಞಾನವನ್ನು ಹುಚ್ಚುತನವಾಗ ಮಾಡಿದ್ದಾನಲ್ಲವೇ.


ಆದರೂ ಪ್ರವೀಣರಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಇಲ್ಲದೆ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.


ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;


ಯಾವನೂ ತನ್ನನ್ನು ತಾನೇ ಮೋಸಗೊಳಿಸದಿರಲಿ. ತಾನು ನಿಮ್ಮಲ್ಲಿ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವವನು ಜ್ಞಾನಿಯಾಗುವಂತೆ ಹುಚ್ಚನಾಗಲಿ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ದುಷ್ಟಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕೆ ಅನುಸಾರವಾಗಿ ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿದನು.


ನೀವು ಪೂರ್ವದಲ್ಲಿ ಅಪರಾಧಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರನಡಿಸುವ ಅಧಿಪತಿಗೆ, ಅಂದರೆ ನಂಬಲೊಲ್ಲದವರನ್ನು ಅವಿಧೇಯತೆಗೆ ಈಗ ಪ್ರೇರೇಪಿಸುವ ಆತ್ಮನಿಗೆ ಅನುಸಾರವಾಗಿ ನಡೆದುಕೊಂಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು