Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:3 - ಕನ್ನಡ ಸತ್ಯವೇದವು J.V. (BSI)

3 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಯ ರೂಪದಲ್ಲಿ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಯೇಸು ಸಾಮ್ಯಗಳ ಮೂಲಕ ಅನೇಕ ವಿಷಯಗಳನ್ನು ಅವರಿಗೆ ಬೋಧಿಸಿದನು. ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೇಸು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದು: “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಸುಮಾರ್ ವಿಶಯಾ ಸಾಂಗುಕ್ ಮನುನ್ ತೊ ಕಾನಿಯಾ ವಾಪ್ರಿ. ತನ್ನಾ ತೆನಿ, “ಎಗ್ದಾ ಎಕ್ ಶೆತ್ಕಾರಿ ಹೊತ್ತೊ ತೊ ಭ್ಹಿಂಯ್ ಸಿಪ್ಡುಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:3
27 ತಿಳಿವುಗಳ ಹೋಲಿಕೆ  

ಆಮೇಲೆ ಆತನು ಅವರಿಗೆ ಹೇಳಿದ್ದೇನಂದರೆ - ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ನನ್ನ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳುಕೊಂಡೀರಿ?


ಆತನು ಈ ತರದ ಅನೇಕ ಸಾಮ್ಯಗಳಿಂದ ಜನರ ಗ್ರಹಿಕೆಗೆ ತಕ್ಕ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. ಸಾಮ್ಯವಿಲ್ಲದೆ ಅವರಿಗೆ ಹೇಳಲಿಲ್ಲ.


ಯೇಸು ಈ ಸಾಮ್ಯಗಳನ್ನು ಮುಗಿಸಿದ ಮೇಲೆ ಅಲ್ಲಿಂದ ಹೊರಟುಹೋದನು.


ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಹೊರಪಡಿಸುವೆನು.


ಇವನು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ಅವರು ತಿಳುಕೊಂಡು ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.


ನಾನು ಧರ್ಮರಹಸ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಡಾರ್ಥವನ್ನು ಪ್ರಕಟಿಸುವೆನು.


ಈ ಸಂಗತಿಗಳನ್ನು ಗೂಢಾರ್ಥವಾಗಿ ನಿಮಗೆ ಹೇಳಿದ್ದೇನೆ; ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮ ಸಂಗಡ ಮಾತಾಡದೆ ತಂದೆಯ ವಿಷಯದಲ್ಲಿ ಸ್ಪಷ್ಟವಾಗಿ ತಿಳಿಸುವ ಕಾಲ ಬರುತ್ತದೆ.


ಆಗ ಪೇತ್ರನು - ಸ್ವಾಮೀ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತೀಯೋ? ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಲು


ಆತನು - ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ, ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕಿವಿಯಿದ್ದರೂ ತಿಳುಕೊಳ್ಳದಂತೆಯೂ ಸಾಮ್ಯರೂಪವಾಗಿ ಹೇಳಲಾಗುತ್ತದೆ.


ಆಗ ಯೇಸು ಅವರ ಕೂಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ತೊಡಗಿ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಸುತ್ತಲು ಬೇಲಿಹಾಕಿಸಿ ದ್ರಾಕ್ಷೆಯ ಆಲೆಗಾಗಿ ಒಂದು ಗುಂಡಿಯನ್ನು ತೆಗಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ - ಸೈತಾನನು ಸೈತಾನನನ್ನು ಬಿಡಿಸುವದುಂಟೇ?


ಅಂಜೂರದ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನೂ ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತರವಾಯಿತೆಂದು ತಿಳುಕೊಳ್ಳುತ್ತೀರಲ್ಲಾ.


ಇವುಗಳೆಲ್ಲಾ ಅವನ ಪ್ರಸ್ತಾಪವೆತ್ತಿ ಅವನ ವಿಷಯವಾಗಿ ಈ ಗೇಲಿಯ ಗೀತಗಳನ್ನು ಹಾಡುವವಲ್ಲವೆ - ಅಯ್ಯೋ, ತನ್ನದಲ್ಲದ್ದನ್ನು ಹೆಚ್ಚೆಚ್ಚಾಗಿ ಕೂಡಿಸಿಕೊಂಡು ಅಡವುಗಳನ್ನು ಹೊರೆಹೊರೆಯಾಗಿ ಇಟ್ಟುಕೊಳ್ಳುವವನ ಗತಿಯನ್ನು ಏನು ಹೇಳಲಿ! ಅವನು ಎಷ್ಟು ಕಾಲ ಹೀಗೆ ಮಾಡಾನು!


ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಪದ್ಯವನ್ನೆತ್ತಿ - ಅಯ್ಯೋ, ನಾವು ತೀರಾ ಸೂರೆ ಹೋದೆವಲ್ಲಾ! [ಯೆಹೋವನು] ನಮ್ಮವರ ಸ್ವಾಸ್ತ್ಯವನ್ನು ಪರಾಧೀನಮಾಡಿದ್ದಾನೆ; ಅಕಟಾ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ! ನಮ್ಮ ಭೂವಿುಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ ಎಂದು ಶೋಕಗೀತವಾಗಿ ಹಾಡುವರು.


ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೆ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ ಎಂಬದಾಗಿ ಅರಿಕೆಮಾಡಿದೆನು.


ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು -


ಯೇಸು ಬೋಧನೆ ಮಾಡುತ್ತಾ ಇನ್ನೂ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನಂದರೆ -


ಕೇಳಿರಿ! ಬಿತ್ತುವವನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜ ದಾರಿಯ ಮಗ್ಗುಲಲ್ಲಿ ಬಿದ್ದವು; ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು