ಮತ್ತಾಯ 13:30 - ಕನ್ನಡ ಸತ್ಯವೇದವು J.V. (BSI)30 ಸುಗ್ಗೀಕಾಲದ ತನಕ ಎರಡೂ ಕೂಡ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ - ಮೊದಲು ಹಣಜಿಯನ್ನು ಆರಿಸಿತೆಗೆದು ಅದನ್ನು ಸುಡುವದಕ್ಕೆ ಹೊರೆಕಟ್ಟಿಹಾಕಿ, ಗೋದಿಯನ್ನು ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಸುಗ್ಗಿಕಾಲದವರೆಗೆ ಹಣಜಿಯೂ ಗೋಧಿಯೂ ಒಟ್ಟಿಗೆ ಬೆಳೆಯಲಿ. ಸುಗ್ಗಿಕಾಲದ ಸಮಯದಲ್ಲಿ ನಾನು ಕೆಲಸದವರಿಗೆ, ಮೊದಲು ಹಣಜಿಗಳನ್ನು ಕೂಡಿಸಿ ಅದನ್ನು ಸುಡುವುದಕ್ಕಾಗಿ ಹೊರೆ ಕಟ್ಟಿ, ನಂತರ ಗೋಧಿಯನ್ನು ಕೂಡಿಸಿ ಅದನ್ನು ನನ್ನ ಕಣಜಕ್ಕೆ ತನ್ನಿರಿ ಎಂದು ಹೇಳುವೆನು’ ಎಂದು ಉತ್ತರಕೊಟ್ಟನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಸುಗ್ಗಿ ಯೆಯ್ ಪತರ್ ಕಳೆಬಿ ಘವ್‍ಬಿ ವಾಂಗ್ಡಾಚ್ ರ್‍ಹಂವ್ದಿ, ತನ್ನಾ ಸುಗ್ಗಿಚ್ಯಾ ದಿಸಿ ಕಾಮ್ ಕರ್‍ತಲ್ಯಾಕ್ನಿ ಮಿಯಾ ಅದ್ದಿ ಕಳೆ ಉಪ್ಸುನ್ ಕಾಡುನ್ ಜಾಳ್ವುನ್ ಟಾಕುಸಾಟ್ನಿ ಪೆಂಡಿಯಾ ಭಾಂದಾ ಅನಿ ಮಾನಾ ಘವ್ ಗೊಳಾ ಕರಾ ಅನಿ ಮಾಜ್ಯಾ ತಟ್ಟ್ಯಾತ್ ಭರುನ್ ಥವಾ ಮನುನ್ ಮಿಯಾ ಸಾಂಗ್ತಾ”. ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |