Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:46 - ಕನ್ನಡ ಸತ್ಯವೇದವು J.V. (BSI)

46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು ತನ್ನ ಬದುಕನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಅನರ್ಘ್ಯವಾದ ಒಂದು ಮುತ್ತನ್ನು ಕಂಡ ಕೂಡಲೆ ವರ್ತಕ ತನ್ನ ಆಸ್ತಿಪಾಸ್ತಿಯನ್ನು ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಒಂದು ದಿನ ಆ ವ್ಯಾಪಾರಿಗೆ ಬಹು ಅಮೂಲ್ಯವಾದ ಒಂದು ಮುತ್ತು ಸಿಕ್ಕಿತು. ಆಗ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಮುತ್ತನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು, ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಅನಿ ತೆಕಾ ಬರಿಲಿ ಮೊತಿ ಗಾವ್ತಾ. ತನ್ನಾ ತೊ ಜಾವ್ನ್ ಅಪ್ನಾಚೆ ಸಗ್ಳೆ ಇಕ್ತಾ ಅನಿ ತಿ ಮೊತಿ ಇಕಾತ್ ಘೆತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:46
15 ತಿಳಿವುಗಳ ಹೋಲಿಕೆ  

ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ದ್ರವ್ಯಕ್ಕೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಬಿಟ್ಟು ಅದರಿಂದಾದ ಸಂತೋಷದಿಂದ ತನ್ನ ಬದುಕನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.


ಜ್ಞಾನವೂ ತಿಳುವಳಿಕೆಯೂ ರಕ್ಷಣ ಕಾರ್ಯಸಮೃದ್ಧಿಯೂ ಇರುವದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವದು.


ಅದನ್ನು ಬೆಳ್ಳಿಯಂತೆಯೂ ನಿಕ್ಷೇಪದಂತೆಯೂ ಹುಡುಕು;


ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಫವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.


ಮತ್ತು ಪರಲೋಕರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.


ಮತ್ತು ಪರಲೋಕರಾಜ್ಯವು ಒಂದು ಬಲೆಗೆ ಹೋಲಿಕೆಯಾಗಿದೆ. ಅದನ್ನು ಸಮುದ್ರದಲ್ಲಿ ಹಾಕಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿದರು.


ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶಿಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ಜಂತದ ಸಾಮಾನು, ಬಹು ಬೆಲೆಯುಳ್ಳ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ ಇವುಗಳಿಂದ ಮಾಡಿದ ಸಕಲ ವಿಧವಾದ ಪಾತ್ರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು