Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:5 - ಕನ್ನಡ ಸತ್ಯವೇದವು J.V. (BSI)

5 ಕೆಲವು ಬೀಜ ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು; ಅಲ್ಲಿ ಮಣ್ಣು ತೆಳ್ಳಗಿದ್ದದರಿಂದ ಅವು ಬೇಗ ಮೊಳೆತವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲು ನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೆಲವು ಬೀಜಗಳು ಬಂಡೆಯ ನೆಲದಲ್ಲಿ ಬಿದ್ದವು. ಅಲ್ಲಿಯ ನೆಲದಲ್ಲಿ ಸಾಕಷ್ಟು ಮಣ್ಣಿಲ್ಲದಿದ್ದುದರಿಂದ ಬೀಜಗಳು ಬೇಗ ಮೊಳೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅನಿ ಉಲ್ಲೆಸೆ ಭ್ಹಿಂಯ್ ಗುಂಡ್ಯಾಚೊ ತಳಾಪ್ ಹೊತ್ತ್ಯಾ ಜಿಮ್ನಿರ್ ಪಡ್ಲೆ ಥೈ ಮಾಟಿ ಲೈ ಪಾತೊಳ್ ಹೊತ್ತಿ. ಥೈ ವೈಲ್ಯಾ-ವೈರ್ ಮಾಟಿ ಹೊತ್ತಿ ತಸೆಮನುನ್ ಬಿ ಲಗ್ಗುನಾಚ್ ತೆ ಉಗಾವ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:5
9 ತಿಳಿವುಗಳ ಹೋಲಿಕೆ  

ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಒಬ್ಬನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾನೆ;


ಧರ್ಮೋಪದೇಶವನ್ನೂ ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿನಪಡಿಸಿಕೊಂಡರು; ಆದಕಾರಣ ಸೇನಾಧೀಶ್ವರ ಯೆಹೋವನಿಂದ ಅತಿರೌದ್ರವು ಅವರ ಮೇಲೆ ಬಿತ್ತು.


ಕುದುರೆಗಳು ಕೋಡುಗಲ್ಲಿನ ಮೇಲೆ ಓಡಾಡುವವೋ; ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷಮಾಡಿ ಧರ್ಮದ ಸುಫಲವನ್ನು ಕಹಿಗೆ ತಂದಿರಲ್ಲಾ.


ಕೇಳಿರಿ! ಬಿತ್ತುವವನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜ ದಾರಿಯ ಮಗ್ಗುಲಲ್ಲಿ ಬಿದ್ದವು; ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು.


ಆದರೆ ಬಿಸಿಲೇರಿದಾಗ ಬಾಡಿ ಬೇರಿಲ್ಲದ ಕಾರಣ ಒಣಗಿಹೋದವು.


ಬೇರೆ ಕೆಲವು ಬೀಜ ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು; ಅಲ್ಲಿ ಮಣ್ಣು ತೆಳ್ಳಗಿದ್ದದರಿಂದ ಅವು ಬೇಗ ಮೊಳೆತವು;


ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; ತಮಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು ಬಳಿಕ ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬೀಜಬಿದ್ದ ಬಂಡೆಯ ನೆಲವಾಗಿರುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು