Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:8 - ಕನ್ನಡ ಸತ್ಯವೇದವು J.V. (BSI)

8 ಇನ್ನು ಕೆಲವು ಒಳ್ಳೆಯ ನೆಲದಲ್ಲಿ ಬಿದ್ದು ಒಂದು ನೂರರಷ್ಟು, ಒಂದು ಅರುವತ್ತರಷ್ಟು, ಒಂದು ಮೂವತ್ತರಷ್ಟು ಫಲವನ್ನು ಕೊಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು, ತೆನೆಬಿಟ್ಟವು. ಕೆಲವು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಫಸಲನ್ನು ಕೊಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಅವು ಬೆಳೆದು ಕಾಳುಬಿಟ್ಟವು. ಕೆಲವು ಗಿಡಗಳು ನೂರರಷ್ಟು, ಕೆಲವು ಗಿಡಗಳು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಕಾಳುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು, ಒಂದು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು ಇನ್ನು ಕೆಲವು ಮೂವತ್ತರಷ್ಟು ಫಲಕೊಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ಅನಿಉಲ್ಲೆಸೆ ಭ್ಹಿಂಯ್, ಬರ್‍ಯಾ ಮಾಟಿತ್ ಪಡ್ಲೆ, ಅನಿ ಝಾಡಾ ಹೊಲಿ, ಝಾಡಾಕ್ನಿ ಕನ್ಸಾ ಹೊಲಿ. ಉಲ್ಲ್ಯಾ ಬಿಯ್ಯಾನ್ ಸೆಂಬರ್ ದಾನೆ ದಿಲ್ಯಾನ್, ಉಲ್ಲ್ಯಾನ್ ಸಾಟ್, ಅನಿ ಉಲ್ಲ್ಯಾನ್ ತಿಸ್ ದಾನೆ ದಿಲ್ಯಾನ್”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:8
11 ತಿಳಿವುಗಳ ಹೋಲಿಕೆ  

ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.


ಒಬ್ಬನು ವಾಕ್ಯವನ್ನು ಕೇಳಿ ತಿಳುಕೊಂಡು ಫಲವಂತನಾಗಿ ನೂರರಷ್ಟಾಗಲಿ ಅರುವತ್ತರಷ್ಟಾಗಲಿ ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ; ಇವನೇ ಒಳ್ಳೆಯ ನೆಲವಾಗಿರುವವನು ಎಂದು ಹೇಳಿದನು.


ನೀವು ಬಹಳ ಫಲಕೊಡುವದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವದು; ಮತ್ತು ನನ್ನ ಶಿಷ್ಯರಾಗುವಿರಿ.


ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರುಷದಲ್ಲಿ ನೂರರಷ್ಟು ಬೆಳೆಯನ್ನು ಹೊಂದಿದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;


ಸರಳರಾಗಿಯೂ ನಿರ್ಮಲರಾಗಿಯೂ ಯೇಸು ಕ್ರಿಸ್ತನ ಮೂಲಕವಾಗಿರುವ ಸುನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಕಾಣಿಸಿಕೊಂಡು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ತರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೇದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ. ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.


ಮತ್ತೆ ಕೆಲವು ಬೀಜ ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.


ಇನ್ನು ಕೆಲವು ಬೀಜ ಒಳ್ಳೆಯ ನೆಲದಲ್ಲಿ ಬಿದ್ದು ಹುಟ್ಟಿ ಬೆಳೆಯುತ್ತಾ ಬಂದು ಒಂದು ಮೂವತ್ತರಷ್ಟು, ಒಂದು ಅರುವತ್ತರಷ್ಟು,


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರುವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಬೀಜಬಿದ್ದ ಒಳ್ಳೆಯ ನೆಲವಾಗಿರುವವರು ಅಂದನು.


ಇನ್ನು ಕೆಲವು ಬೀಜ ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ನೂರರಷ್ಟು ಫಲವನ್ನು ಕೊಟ್ಟವು. ಈ ಮಾತುಗಳನ್ನು ಹೇಳಿ ಆತನು - ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಎಂದು ಕೂಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು