ಮತ್ತಾಯ 14:15 - ಕನ್ನಡ ಸತ್ಯವೇದವು J.V. (BSI)15 ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು - ಇದು ಅಡವಿ, ಈಗ ಹೊತ್ತು ಹೋಯಿತು; ಈ ಗುಂಪಿಗೆ ಅಪ್ಪಣೆ ಕೊಡು; ಅವರು ಹಳ್ಳಿಪಳ್ಳಿಗಳಿಗೆ ಹೋಗಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳಲಿ ಎಂದು ಹೇಳಲಾಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಈಗಾಗಲೇ ಹೊತ್ತು ಮೀರಿಹೋಗಿದೆ. ಜನಸಮೂಹವನ್ನು ಕಳುಹಿಸಿಬಿಡಿ, ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೆ ಬೇಕಾದ ತಿಂಡಿತಿನಿಸುಗಳನ್ನು ಕೊಂಡುಕೊಳ್ಳಲಿ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಜನರು ವಾಸಿಸುವುದಿಲ್ಲ. ಈಗಾಗಲೇ ಸಮಯವಾಗಿದೆ. ಜನರು ತಮಗಾಗಿ ಆಹಾರವನ್ನು ಕೊಂಡುಕೊಳ್ಳಲು ಅವರನ್ನು ಊರುಗಳಿಗೆ ಕಳುಹಿಸಿಬಿಡು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸಂಜೆಯಾದಾಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಸಮಯವು ದಾಟಿದೆ. ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತ್ಯಾಚ್ ದಿಸ್ ಸಾಂಚೆಕ್ಡೆ ತೆಚಿ ಶಿಸಾ ಯೆಲಿ. ಅನಿ, “ಅತ್ತಾ ಬಗಟ್ಲ್ಯಾರ್ ಲೈ ಎಳ್ ಹೊಲೊ ಹ್ಯೊ ಜಾಗೊ ಬಗಟ್ಲ್ಯಾರ್ ಎಕ್ ನಮುನಿ ಭಾಯ್ರ್ ಕಾಡುನ್ ಟಾಕ್ಲ್ಯಾ ಸರ್ಕೊ ಹಾಯ್, ಲೊಕಾಕ್ನಿ ಧಾಡುನ್ ದಿ. ತೆನಿ ಗಾಂವಾತ್ನಿ ಜಾವ್ನ್ ಜೆವ್ನಾಕ್ ಇಕಾತ್ ಹಾನುನ್ದಿತ್.” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |