Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:2 - ಕನ್ನಡ ಸತ್ಯವೇದವು J.V. (BSI)

2 ತನ್ನ ಪರಿವಾರದವರಿಗೆ - ಇವನು ಸ್ನಾನಿಕನಾದ ಯೋಹಾನನು; ತಿರಿಗಿ ಬದುಕಿ ಬಂದಿದ್ದಾನೆ; ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಅವೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ತನ್ನ ಪರಿಚಾರಕರಿಗೆ, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದ್ದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಹೆರೋದನು ತನ್ನ ಸೇವಕರಿಗೆ, “ನಿಜವಾಗಿಯೂ ಯೇಸುವೇ ಸ್ನಾನಿಕ ಯೋಹಾನನು. ಅವನು ಮತ್ತೆ ಜೀವಂತವಾಗಿ ಬಂದಿದ್ದಾನೆ. ಆದಕಾರಣವೇ ಅವನು ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ತನ್ನ ಸೇವಕರಿಗೆ, “ಈತನು ಸ್ನಾನಿಕನಾದ ಯೋಹಾನನೇ. ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ! ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ತೆನಿ ಅಪ್ನಾಚ್ಯಾ ಅದಿಕಾರ್‍ಯಾಕ್ನಿ, “ತೊ ಖರೆಚ್ ಜುವಾಂವ್ ಬಾವ್ತಿಸ್ ಮರಲ್ಲೊ ಝಿತ್ತೊ ಹೊವ್ನ್ ಯೆಲಾ, ತಸೆ ಮನುನ್ ತೆಕಾ ಮೊಟಿ ವಿಚಿತ್ರ್ ಕಾಮಾ ಕರ್‍ತಲಿ ತಾಕತ್ ಹಾಯ್,” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:2
7 ತಿಳಿವುಗಳ ಹೋಲಿಕೆ  

ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ, ಬೇರೆ ಕೆಲವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.


ಅನೇಕರು ಆತನ ಬಳಿಗೆ ಬಂದು - ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ನಿಜವಾಗಿತ್ತು ಎಂದು ಮಾತಾಡುತ್ತಿದ್ದರು.


ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.


ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕನಾದ ಯೋಹಾನನಿಗಿಂತ ದೊಡ್ಡವನು ಎದ್ದಿಲ್ಲ. ಆದರೂ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು -


ಮತ್ತು ಅರಸನಾದ ಹೆರೋದನು [ಯೇಸುವಿನ ಸುದ್ದಿಯನ್ನು] ಕೇಳಿದನು. ಯಾಕಂದರೆ ಆತನ ಹೆಸರು ಪ್ರಸಿದ್ಧವಾಯಿತು, ಮತ್ತು ಜನರು ಆತನ ವಿಷಯದಲ್ಲಿ - ಸ್ನಾನಿಕನಾದ ಯೋಹಾನನೇ ತಿರಿಗಿ ಬದುಕಿಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಅವೆ ಎಂದು ಹೇಳುತ್ತಿದ್ದರು.


ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಪಡುವವನಾದನು. ಯಾಕಂದರೆ ಸತ್ತಿದ್ದ ಯೋಹಾನನು ತಿರಿಗಿ ಬದುಕಿಬಂದಿದ್ದಾನೆಂದು ಕೆಲವರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು