Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:25 - ಕನ್ನಡ ಸತ್ಯವೇದವು J.V. (BSI)

25 ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ರಾತ್ರಿಯ ಕಡೇ ಜಾವದ ಸಮಯ. ಯೇಸು ಸರೋವರದ ಮೇಲೆ ನಡೆದುಕೊಂಡೇ ಶಿಷ್ಯರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ರಾತ್ರಿಯ ಕಡೇ ಜಾವದ ಸಮಯದಲ್ಲಿ ಆತನ ಶಿಷ್ಯರು ದೋಣಿಯಲ್ಲೇ ಇದ್ದರು. ಆತನು ಸರೋವರದ ನೀರಿನ ಮೇಲೆ ನಡೆಯುತ್ತಾ ಅವರ ಬಳಿಗೆ ಬರತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ರಾತ್ರಿ ಮೂರು ಗಂಟೆಯಲ್ಲಿ ಯೇಸು ಸರೋವರದ ಮೇಲೆ, ನಡೆಯುತ್ತಾ ಶಿಷ್ಯರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಸಕ್ಕಾಳ್ಚೆ ಕೊಂಬೊ ಭೊಕ್ತಲ್ಯಾ ಏಳಾರ್ ಜೆಜು ಪಾನಿಯಾ ವರ್‍ತಿ ಚಲುನ್ಗೆತ್ ಶಿಸಾಂಚ್ಯಾಕ್ಡೆ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:25
11 ತಿಳಿವುಗಳ ಹೋಲಿಕೆ  

ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲೋಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.


ಹೀಗಿರಲಾಗಿ ಅವರು ಹುಟ್ಟುಹಾಕುತ್ತಾ ಹೆಚ್ಚು ಕಡಿಮೆ ಒಂದು ಹರದಾರಿ ದೂರ ಹೋದ ಬಳಿಕ ಯೇಸು ಸಮುದ್ರದ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವದನ್ನು ನೋಡಿ ಅಂಜಿದರು.


ಎದುರು ಗಾಳಿ ಬೀಸುತ್ತಿದ್ದದರಿಂದ ಶಿಷ್ಯರು ಹುಟ್ಟು ಹಾಕಿ ಹಾಕಿ ಒದ್ದಾಡುವದನ್ನು ಆತನು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.


ಕಳ್ಳನು ಬರುವ ಜಾವ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ.


ಎರಡನೆಯ ಜಾವದಲ್ಲಿಯಾಗಲಿ ಮೂರನೆಯ ಜಾವದಲ್ಲಿಯಾಗಲಿ ಬಂದಾತನಿಗೆ ಹಾಗೆ ಕಾಣಿಸಿಕೊಂಡವರು ಧನ್ಯರು.


ಜಲರಾಶಿಗಳ ಮೇಲೆ ಉಪ್ಪರಿಗೆಗಳನ್ನು ಕಟ್ಟಿಕೊಂಡಿದ್ದೀ; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿದ್ದೀ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.


ಅನಂತರ ಸಮುದ್ರದ ಮೇಲೆಯೂ ಭೂವಿುಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ


ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು; ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು; ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂವಿುಯ ಮೇಲೆಯೂ ಇಟ್ಟು


ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತಾಡಿ - ನೀನು ಹೋಗಿ ಸಮುದ್ರದ ಮೇಲೆಯೂ ಭೂವಿುಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೋ ಎಂದು ಹೇಳಿತು.


ಮನೇಯಜಮಾನನು ಸಂಜೆಯಲ್ಲೋ ಸರುಹೊತ್ತಿನಲ್ಲೋ ಕೋಳಿ ಕೂಗುವಾಗಲೋ ಮುಂಜಾನೆಯಲ್ಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು