Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:27 - ಕನ್ನಡ ಸತ್ಯವೇದವು J.V. (BSI)

27 ಕೂಡಲೆ ಯೇಸು ಮಾತಾಡಿ ಅವರಿಗೆ - ಧೈರ್ಯವಾಗಿರಿ; ನಾನು; ಅಂಜಬೇಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ತಕ್ಷಣವೇ ಯೇಸು, “ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ,” ಎಂದು ಅವರೊಡನೆ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಕೂಡಲೇ ಯೇಸು, “ಚಿಂತಿಸಬೇಡಿ! ನಾನೇ! ಭಯಪಡಬೇಡಿ” ಎಂದು ಅವರೊಂದಿಗೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೇಸು ತಕ್ಷಣವೇ ಅವರಿಗೆ, “ಧೈರ್ಯವಾಗಿರಿ, ನಾನೇ, ಭಯಪಡಬೇಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ಎಗ್ದಮ್ ಜೆಜುನ್ ತೆಂಕಾ,“ಧೈರೊ ಕರಾ, ಭಿಂವ್‍ನಕಾಶಿ. ಮಿಯಾ ತೊ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:27
21 ತಿಳಿವುಗಳ ಹೋಲಿಕೆ  

ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ಆ ದಿನದ ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು - ಧೈರ್ಯದಿಂದಿರು; ನೀನು ಯೆರೂಸಲೇವಿುನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವದು ಅಂದನು.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.


ಆದರೆ ಆತನು - ಅಂಜಬೇಡಿರಿ, ನಾನು, ಅಂದನು.


ಆದರೆ ಯೇಸು ಹತ್ತರಕ್ಕೆ ಬಂದು ಅವರನ್ನು ಮುಟ್ಟಿ - ಏಳಿರಿ, ಹೆದರಬೇಡಿರಿ ಅಂದನು.


ಅಲ್ಲಿಗೆ ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿರುವ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯುರೋಗಿಗೆ - ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.


ನಾನೇ, ನಾನೇ ನಿನ್ನನ್ನು ಸಂತೈಸುವವನಾಗಿರುವಲ್ಲಿ ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಆ ದೂತನು ಆಕೆಗೆ - ಮರಿಯಳೇ, ಹೆದರಬೇಡ; ನಿನಗೆ ದೇವರ ದಯೆ ದೊರಕಿತು.


ಆದರೆ ಆ ದೂತನು ಅವನಿಗೆ - ಜಕರೀಯಾ, ಭಯಪಬೇಡ; ನಿನ್ನ ವಿಜ್ಞಾಪನೆ ದೇವರಿಗೆ ಮುಟ್ಟಿತು; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು.


ಯೇಸು ಅವರಿಗೆ - ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ನನ್ನನ್ನು ನೋಡುವರು ಎಂದು ಹೇಳಿದನು.


ಆ ದೂತನು ಅವರಿಗೆ - ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭಸಮಾಚಾರವನ್ನು ನಿಮಗೆ ತಿಳಿಸುತ್ತೇನೆ.


ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.


ಅದಕ್ಕೆ ಪೇತ್ರನು - ಸ್ವಾಮೀ, ನೀನೇಯಾದರೆ ನನಗೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವದಕ್ಕೆ ಅಪ್ಪಣೆಕೊಡು ಅನ್ನಲು ಆತನು - ಬಾ ಅಂದನು.


ಆಗ ದೂತನು ಆ ಹೆಂಗಸರಿಗೆ - ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ಹುಡುಕುತ್ತೀರೆಂದು ಬಲ್ಲೆನು; ಆತನು ಇಲ್ಲಿ ಇಲ್ಲ;


ಆತನು ಕೂಡಲೆ ಅವರನ್ನು ಮಾತಾಡಿಸಿ ಅವರಿಗೆ - ಧೈರ್ಯವಾಗಿರಿ; ನಾನು; ಅಂಜಬೇಡಿರಿ ಎಂದು ಹೇಳಿದನು.


ಸೀಮೋನನ ಪಾಲುಗಾರರಾಗಿದ್ದಂಥ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯಪಟ್ಟರು. ಯೇಸು ಸೀಮೋನನಿಗೆ - ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವವನಾಗಿರುವಿ ಎಂದು ಹೇಳಿದನು.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು