Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:29 - ಕನ್ನಡ ಸತ್ಯವೇದವು J.V. (BSI)

29 ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಪೇತ್ರನು ದೋಣಿಯನ್ನು ಬಿಟ್ಟು ನೀರಿನ ಮೇಲೆ ನಡೆಯುತ್ತಾ ಯೇಸುವಿನತ್ತ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೇಸು, “ಪೇತ್ರನೇ, ಬಾ” ಅಂದನು. ಕೂಡಲೆ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ನೀರಿನ ಮೇಲೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದಕ್ಕೆ ಯೇಸು, “ಬಾ,” ಎಂದರು. ಆಗ ಪೇತ್ರನು ದೋಣಿಯಿಂದ ಇಳಿದು, ಯೇಸುವಿನ ಬಳಿಗೆ ಹೋಗುವುದಕ್ಕಾಗಿ ನೀರಿನ ಮೇಲೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಜೆಜುನ್ ತೆಕಾ,“ಯೆ, ತರ್!” ಮನುನ್ ಜಬಾಬ್ ದಿಲ್ಯಾನ್. ತನ್ನಾ ಪೆದ್ರು ಢೊನಿತ್ನಾ ಪಾನಿಯಾ ವರ್‍ತಿ ಯೆಲೊ ಅನಿ ಪಾನಿಯಾ ವರ್‍ತಿ ಚಲುನ್ಗೆತ್ ಜೆಜುಕ್ಡೆ ಯೆವ್‍ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:29
10 ತಿಳಿವುಗಳ ಹೋಲಿಕೆ  

ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.


ಯೇಸು ಅವನಿಗೆ - ನಿನ್ನ ಕೈಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ? ನಂಬುವವನಿಗೆ ಎಲ್ಲಾ ಆಗುವದು ಎಂದು ಹೇಳಿದನು.


ನೀವು ನೋಡುವಂಥ ನಿಮಗೆ ಗುರುತಿರುವಂಥ ಈ ಮನುಷ್ಯನು ನೆಟ್ಟಗಾದದ್ದಕ್ಕೆ ಆತನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಪೂರ್ಣಕ್ಷೇಮವನ್ನು ಕೊಟ್ಟಿತು.


ಸ್ವಾವಿುಯು - ಸಾಸಿವೇ ಕಾಳಷ್ಟು ನಂಬಿಕೆ ನಿಮಗಿದ್ದರೆ ನೀವು ಈ ಅತ್ತೀಮರಕ್ಕೆ - ನೀನು ಬೇರು ಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವದು.


ಅವನು ಹೆಚ್ಚುಕಡಿಮೆ ನೂರು ವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.


ಅದಕ್ಕೆ ಯೇಸು - ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ನಾನು ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ. ಇದು ಮಾತ್ರವಲ್ಲದೆ ಈ ಬೆಟ್ಟಕ್ಕೆ - ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೆ ಅದೂ ಆಗುವದು.


ನಿಮ್ಮ ನಂಬಿಕೆ ಕಡಿಮೆಯಾಗಿರುವದರಿಂದಲೇ ಆಗಲಿಲ್ಲ; ನಿಮಗೆ ಸತ್ಯವಾಗಿ ಹೇಳುತ್ತೇನೆ, ಸಾಸಿವೇಕಾಳಷ್ಟು ನಂಬಿಕೆ ನಿಮಗೆ ಇರುವದಾದರೆ ನೀವು ಈ ಬೆಟ್ಟಕ್ಕೆ -


ಅದಕ್ಕೆ ಪೇತ್ರನು - ಸ್ವಾಮೀ, ನೀನೇಯಾದರೆ ನನಗೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವದಕ್ಕೆ ಅಪ್ಪಣೆಕೊಡು ಅನ್ನಲು ಆತನು - ಬಾ ಅಂದನು.


ಆದರೆ ಗಾಳಿಯನ್ನು ನೋಡಿ ಭಯಪಟ್ಟು ಮುಣುಗುತ್ತಾ - ಸ್ವಾಮೀ, ನನ್ನನ್ನು ಕಾಪಾಡು ಎಂದು ಕೂಗಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು