Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:5 - ಕನ್ನಡ ಸತ್ಯವೇದವು J.V. (BSI)

5 ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರು ಅವನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟು [ಕೊಲ್ಲಿಸಲಿಲ್ಲ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೊವಾನ್ನನನ್ನು ಕೊಲ್ಲಿಸಬೇಕೆಂದಿದ್ದರೂ ಹೆರೋದನು ಜನರಿಗೆ ಹೆದರಿದ್ದನು. ಅವರು ಆತನನ್ನು ಪ್ರವಾದಿಯೆಂದು ಭಾವಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹೆರೋದನು ಯೋಹಾನನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟು ಕೊಲ್ಲಿಸಿರಲಿಲ್ಲ. ಜನರು ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹೆರೋದನು ಯೋಹಾನನನ್ನು ಕೊಲ್ಲಬೇಕೆಂದಿದ್ದರೂ ಜನಸಮೂಹಕ್ಕೆ ಭಯಪಟ್ಟನು. ಅವರು ಯೋಹಾನನನ್ನು ಪ್ರವಾದಿಯೆಂದು ಎಣಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹೆರೊದ್ ಜುವಾಂವಾಕ್ ಜಿವಾನಿ ಮಾರುಕ್ ಬಗಿ, ಖರೆ ತೊ ಜುದೆವ್ ಲೊಕಾಕ್ನಿ ಭಿಂವಲ್ಲೊ. ಕಶ್ಯಾಕ್ ಮಟ್ಲ್ಯಾರ್ ತೆನಿ ಜುವಾಂವ್ ಎಕ್ ಪ್ರವಾದಿ ಮನುನ್ ಮಾನುನ್ ಘೆಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:5
10 ತಿಳಿವುಗಳ ಹೋಲಿಕೆ  

ಮನುಷ್ಯರಿಂದ ಬಂತೆಂದು ಹೇಳಿದರೆ ನಮಗೆ ಜನರ ಭಯವದೆ; ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸಿದ್ದಾರಲ್ಲಾ ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.


ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವದಕ್ಕೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ ಎಂದು ನಿಮಗೆ ಹೇಳುತ್ತೇನೆ.


ಆಗ ಅಧಿಪತಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು; ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಬಲಾತ್ಕಾರ ಮಾಡಲಿಲ್ಲ.


ನಡೆದಿದ್ದ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಾ ಇದ್ದ ಕಾರಣ ಅವರ ದೆಸೆಯಿಂದ ಸಭಿಕರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು.


ಮನುಷ್ಯರಿಂದ ಬಂತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಂಡು


ಯೋಹಾನನು ಧರ್ಮಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು, ನೀವು ಅವನನ್ನು ನಂಬಲಿಲ್ಲ; ಭ್ರಷ್ಟರೂ ಸೂಳೆಯರೂ ಅವನನ್ನು ನಂಬಿದರು; ನೀವು ಇದನ್ನು ನೋಡಿದಾಗ್ಯೂ ಪಶ್ಚಾತ್ತಾಪಪಡಲಿಲ್ಲ, ಅವನನ್ನು ನಂಬಲಿಲ್ಲ.


ಅರಸನಾದ ಯೆಹೋಯಾಕೀಮನೂ ಅವನ ಎಲ್ಲಾ ಪ್ರಸಿದ್ಧ ಶೂರರೂ ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು