ಮತ್ತಾಯ 15:2 - ಕನ್ನಡ ಸತ್ಯವೇದವು J.V. (BSI)2 ನಿನ್ನ ಶಿಷ್ಯರು ಹಿರಿಯರಿಂದ ಬಂದ ಸಂಪ್ರದಾಯವನ್ನು ಯಾಕೆ ಮೀರುತ್ತಾರೆ? ಅವರು ಕೈತೊಳಕೊಳ್ಳದೆ ಆಹಾರ ತೆಗೆದುಕೊಳ್ಳುತ್ತಾರಲ್ಲಾ ಎಂದು ಕೇಳಿದ್ದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಸಂಪ್ರದಾಯಗಳನ್ನು ಮೀರುವುದೇಕೆ? ಅವರು ಊಟಕ್ಕೆ ಮುಂಚೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದೇಕೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನಮ್ಮ ಪೂರ್ವಿಕರಿಂದ ಬಂದ ಸಂಪ್ರದಾಯಗಳಿಗೆ ನಿನ್ನ ಶಿಷ್ಯರು ಏಕೆ ವಿಧೇಯರಾಗಿರುವುದಿಲ್ಲ? ನಿನ್ನ ಶಿಷ್ಯರು ಊಟ ಮಾಡುವುದಕ್ಕೆ ಮುಂಚೆ ಕೈ ತೊಳೆಯುವುದಿಲ್ಲವೇಕೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯವನ್ನು ಏಕೆ ಮೀರುತ್ತಾರೆ? ಅವರು ಊಟಕ್ಕೆ ಮುಂಚೆ ತಮ್ಮ ಕೈಗಳನ್ನು ಏಕೆ ತೊಳೆದುಕೊಳ್ಳುವುದಿಲ್ಲ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 “ತುಜಿ ಶಿಸಾ ಅದ್ಲ್ಯಾ ಲೊಕಾನಿ ಕರಲ್ಲ್ಯಾ ಪದ್ದತಿಯಾ ಕಶ್ಯಾಕ್ ಮೊಡ್ತ್ಯಾತ್? ತೆನಿ ಜೆವ್ನಾಚ್ಯಾ ಅದ್ದಿ ಅಪ್ನಾಚಿ ಹಾತಾ ಧುವ್ನ್ ಘೆಯ್‌ನ್ಯಾತ್.” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |
ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಸಂಪ್ರದಾಯವನ್ನು ಹಿಡಿದು ತಮ್ಮ ಕೈಗಳನ್ನು ಚೆನ್ನಾಗಿ ತೊಳಕೊಳ್ಳದೆ ಆಹಾರ ತೆಗೆದುಕೊಳ್ಳುವದಿಲ್ಲ; ಮತ್ತು ಪೇಟೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಆಹಾರ ತೆಗೆದುಕೊಳ್ಳುವದಿಲ್ಲ; ಇದಲ್ಲದೆ ಅವರಲ್ಲಿ ತಂಬಿಗೆ ಬಟ್ಟಲು ತಪ್ಪಲೆಗಳನ್ನು ಬೆಳಗಿ ತೊಳೆಯುವದೇ ಮೊದಲಾದ ಅನೇಕಾಚಾರಗಳನ್ನು ನಡಿಸುವ ನೇಮಕವುಂಟು. ಆತನ ಶಿಷ್ಯರಲ್ಲಿ ಕೆಲವರು ಮೈಲಿಗೆಯ ಕೈಯಿಂದ, ಅಂದರೆ ಕೈತೊಳಕೊಳ್ಳದೆ ಆಹಾರ ತೆಗೆದುಕೊಳ್ಳುವದನ್ನು ಆ ಫರಿಸಾಯರೂ ಶಾಸ್ತ್ರಿಗಳೂ ಕಂಡು