Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:25 - ಕನ್ನಡ ಸತ್ಯವೇದವು J.V. (BSI)

25 ಆಗ ಆಕೆ ಬಂದು ಆತನಿಗೆ ಅಡ್ಡಬಿದ್ದು - ಸ್ವಾಮೀ, ನನಗೆ ಅನುಗ್ರಹ ಮಾಡಬೇಕು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, “ಕರ್ತನೇ ನನಗೆ ಸಹಾಯಮಾಡು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೂ ಆಕೆ ಯೇಸುವಿಗೆ ಅಡ್ಡಬಿದ್ದು, “ಸ್ವಾಮೀ, ಸಹಾಯ ಮಾಡಿ,” ಎಂದು ಯಾಚಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನನಗೆ ಸಹಾಯ ಮಾಡು” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಕೆಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮೀ, ನನಗೆ ಸಹಾಯಮಾಡು!” ಎಂದು ಕೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ತ್ಯಾ ಬಾಯ್ಕೊಮನ್ಸಿನ್ ಫಿಡೆ ಯೆವ್ನ್ ಜೆಜುಚ್ಯಾ ಪಾಯಾ ಪಡ್ಲಿನ್ ಅನಿ, “ಧನಿಯಾ ಮಾಜಿ ಮಜತ್ ಕರ್!” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:25
10 ತಿಳಿವುಗಳ ಹೋಲಿಕೆ  

ಮತ್ತು ಇವನನ್ನು ಕೊಲ್ಲಬೇಕೆಂದು ಆಗಾಗ್ಗೆ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯಮಾಡು ಅಂದನು.


ಆ ಗುಂಪಿನವರು - ಸುಮ್ಮನಿರಿ ಎಂದು ಅವರನ್ನು ಗದರಿಸಲು ಅವರು - ಸ್ವಾಮೀ, ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಹೆಚ್ಚಾಗಿ ಕೂಗಿಕೊಂಡರು.


ಆಗ ದೋಣಿಯಲ್ಲಿದ್ದವರು - ನಿಜವಾಗಿ ನೀನು ದೇವಕುಮಾರನು ಎಂದು ಹೇಳಿ ಆತನಿಗೆ ನಮಸ್ಕರಿಸಿದರು.


ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು; ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯೂ ಕಂಡು ಅಲ್ಲಿ ನಮ್ಮೊಡನೆ ಮಾತಾಡಿದನು;


ಆ ಪುರುಷನು - ನನ್ನನ್ನು ಬಿಡು, ಬೆಳಗಾಗುತ್ತದೆ ಅನ್ನಲು, ಯಾಕೋಬನು - ನೀನು ನನ್ನನ್ನು ಆಶೀರ್ವದಿಸಿದ ಹೊರತು ನಿನ್ನನ್ನು ಬಿಡುವದಿಲ್ಲ ಅಂದನು.


ಕೂಡಲೆ ಆ ಹುಡುಗನ ತಂದೆಯು - ನಂಬುತ್ತೇನೆ, ನನಗೆ ನಂಬಿಕೆ ಕಡಿಮೆಯಾಗಿದ್ದರೂ ಸಹಾಯಮಾಡು ಎಂದು ಕೂಗಿ ಹೇಳಿದನು.


ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು - ಸ್ವಾಮೀ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಅಂದನು.


ಅದಕ್ಕಾತನು - ಮಕ್ಕಳು ತಿನ್ನುವ ರೊಟ್ಟಿಯನ್ನು ತಕ್ಕೊಂಡು ನಾಯಿಮರಿಗಳಿಗೆ ಹಾಕುವದು ಸರಿಯಲ್ಲ ಎಂದು ಉತ್ತರಕೊಡಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು