Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:29 - ಕನ್ನಡ ಸತ್ಯವೇದವು J.V. (BSI)

29 ಯೇಸು ಅಲ್ಲಿಂದ ಹೊರಟು ಗಲಿಲಾಯಸಮುದ್ರದ ಬಳಿಗೆ ಬಂದು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು, ಗಲಿಲೇಯ ಸರೋವರದ ತೀರದಲ್ಲೇ ನಡೆದು, ಒಂದು ಗುಡ್ಡವನ್ನು ಹತ್ತಿ ಅಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಯೇಸು ಆ ಸ್ಥಳವನ್ನು ಬಿಟ್ಟು ಗಲಿಲಾಯ ಸರೋವರದ ದಡಕ್ಕೆ ಹೋಗಿ ಒಂದು ಬೆಟ್ಟದ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೇಸು ಅಲ್ಲಿಂದ ಹೊರಟು ಗಲಿಲಾಯ ಸರೋವರದ ಸಮೀಪಕ್ಕೆ ಬಂದು, ಬೆಟ್ಟವನ್ನು ಹತ್ತಿ ಅಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಜೆಜು ಥೈತ್ನಾ, ಗಾಲಿಲಿಯಾ ಸಮುಂದರಾಚ್ಯಾ ಜಗ್ಗೊಳ್ ಗೆಲೊ, ಅನಿ ಎಕ್ ಮಡ್ಡಿ ವರ್‍ತಿ ಚೆಡುನ್ ಥೈ ತೊ ಬಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:29
12 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ, ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಅಣ್ಣತಮ್ಮಂದಿರಿಬ್ಬರು ಬಲೆಬೀಸುವದನ್ನು ಕಂಡನು; ಅವರು ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ತಮ್ಮನಾದ ಅಂದ್ರೆಯ. ಅವರು ಬೆಸ್ತರು, ಸಮುದ್ರದಲ್ಲಿ ಬಲೆಬೀಸುತ್ತಿದ್ದರು.


ತರುವಾಯ ಯೇಸು ಗಲಿಲಾಯದ ಸಮುದ್ರದ ಆಚೆಗೆ ಹೋದನು; ಅದಕ್ಕೆ ತಿಬೇರಿಯದ ಸಮುದ್ರವೆಂತಲೂ ಹೇಳುತ್ತಾರೆ.


ಆತನು ಆ ಜನರ ಗುಂಪುಗಳನ್ನು ಕಂಡು ಬೆಟ್ಟವನ್ನೇರಿ ಕೂತುಕೊಂಡ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.


ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತಿರಿಗಿ ತನ್ನನ್ನು ತೋರಿಸಿಕೊಂಡನು.


ಆದರೆ ಅಷ್ಟರೊಳಗೆ ಬೇರೆ ದೋಣಿಗಳು ತಿಬೇರಿಯದಿಂದ ಹೊರಟು ಸ್ವಾವಿುಯು ಸ್ತೋತ್ರಮಾಡಿ ಜನರಿಗೆ ರೊಟ್ಟೀ ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದಿದ್ದವು.


ಒಂದಾನೊಂದು ದಿವಸ ಜನರು ಒತ್ತಾಗಿ ಬಂದು ಆತನ ಮೇಲೆ ಬಿದ್ದುಕೊಂಡು ದೇವರ ವಾಕ್ಯವನ್ನು ಕೇಳುತ್ತಿರಲು


ಹೀಗಿರುವಲ್ಲಿ ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನೂ ಸೀಮೋನನ ತಮ್ಮನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆಬೀಸುವದನ್ನು ಕಂಡನು. ಅವರು ಬೆಸ್ತರು.


ಬಹಳ ಜನರು ಆತನ ಬಳಿಗೆ ಕೂಡಿಬಂದದರಿಂದ ಆತನು ದೋಣಿ ಹತ್ತಿ ಕೂತುಕೊಂಡನು. ಆ ಜನರೆಲ್ಲರು ದಡದಲ್ಲಿ ನಿಂತಿದ್ದರು.


ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿದನು; ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿಗಿರುವ ಗಲಿಲಾಯ ಸೀಮೆ ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾನೆ.


ಯೊರ್ದನ್ ಹೊಳೆಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್‍ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಇವೇ ಅವನ ರಾಜ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು