Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:6 - ಕನ್ನಡ ಸತ್ಯವೇದವು J.V. (BSI)

6 ಅವನಿಗೆ ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾದದ್ದಿಲ್ಲ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿವಿುತ್ತ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇನ್ನು ಅವನು ತನ್ನ ತಂದೆ ತಾಯಿಗಳನ್ನು ಗೌರವಿಸಬೇಕಾಗಿಲ್ಲ, ಎಂದು ಬೋಧಿಸುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನೇ ನಿರರ್ಥಕಮಾಡಿಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನು ತನ್ನ ತಂದೆಯನ್ನು ಗೌರವಿಸಬೇಕಿಲ್ಲ ಎಂದು ನೀವು ಬೋಧಿಸುತ್ತೀರಿ. ಹೀಗಿರಲು ನಿಮ್ಮ ಸಂಪ್ರದಾಯವೇ ದೇವರ ಆಜ್ಞೆಯನ್ನು ತಳ್ಳಿಹಾಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ ತ್ಯಾ ಬಾಯ್-ಬಾಬಾಕ್ ಮಾನ್ ದಿತಲಿ ಗರಜ್ ನಾ ಮನುನ್ ತುಮಿ ಶಿಕ್ವುತ್ಯಾಶಿ. ಅಶೆ ತುಮಿ ತುಮ್ಚೆ ಖಾಯ್ದೆ ಪಾಳುಸಾಟ್ನಿ ಮನುನ್ ದೆವಾಚೆ ಖಾಯ್ದೆ ಸೊಡುನ್ ಸೊಡ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:6
12 ತಿಳಿವುಗಳ ಹೋಲಿಕೆ  

ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕಡೆಯಾದವನೂ ಆಗಿದ್ದಾನೆ.


ಹೀಗಿರಲು ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ ಎಂದು ನೀವು ಅಂದುಕೊಳ್ಳುವದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳನ್ನಾಗಿ ಮಾಡಿದೆ.


ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ ಎಂದು ಹೇಳಿದನು.


ಯೆಹೋವನೇ, ನೀನು ಕಾರ್ಯನಡಿಸುವದಕ್ಕೆ ಸಮಯಬಂದದೆ; ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.


ನಂಬುವವಳಾದ ಸ್ತ್ರೀಯ ಅಧೀನದಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.


ಹಾಗಾದರೆ ನಂಬಿಕೆಯಿಂದ ಧರ್ಮಪ್ರಮಾಣವನ್ನು ನಿರರ್ಥಕಮಾಡುತ್ತೇವೋ? ಎಂದಿಗೂ ಇಲ್ಲ. ಧರ್ಮಪ್ರಮಾಣವನ್ನು ಸ್ಥಿರಪಡಿಸುತ್ತೇವೆ.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟದರಿಂದ ಇನ್ನು ನನಗೆ ಯಾಜಕ ಸೇವೆಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು; ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ ನಾನು ನಿಮ್ಮ ಸಂತತಿಯವರನ್ನು ಮರೆಯುವೆನು.


ಮತಾಸಕ್ತಿಯು ನನ್ನನ್ನು ದಹಿಸಿಬಿಟ್ಟಿತು; ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದಾರಲ್ಲಾ.


ನೀವೋ, ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ನೋಡಿ - ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗಾಗಿ ಇಟ್ಟಿದ್ದೇನೆ ಎಂದು ಹೇಳುವದಾದರೆ


ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ; ಅವನು ಬರೆದದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು