Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:12 - ಕನ್ನಡ ಸತ್ಯವೇದವು J.V. (BSI)

12 ಆಗ ಅವರು ರೊಟ್ಟಿಯ ಹುಳಿ ಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬದಾಗಿ ತಿಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ರೊಟ್ಟಿಯ ಹಿಟ್ಟನ್ನು ಹುದುಗೆಬ್ಬಿಸುವ ಹುಳಿಯನ್ನು ಕುರಿತು ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯವಾಗಿ ಜಾಗರೂಕರಾಗಿರಬೇಕೆಂದು ಯೇಸು ಎಚ್ಚರಿಸಿದರೆಂದು ಆಗ ಶಿಷ್ಯರು ಅರ್ಥಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಶಿಷ್ಯರು ಯೇಸು ಹೇಳಿದ್ದನ್ನು ಅರ್ಥಮಾಡಿಕೊಂಡರು. ಆತನು ಅವರಿಗೆ ರೊಟ್ಟಿಯಲ್ಲಿ ಬೆರೆಸಿದ್ದ ಹುಳಿಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಲಿಲ್ಲ. ಫರಿಸಾಯರು ಮತ್ತು ಸದ್ದುಕಾಯರ ಬೋಧನೆಯ ಪ್ರಭಾವಕ್ಕೆ ಒಳಗಾಗದಂತೆ ಎಚ್ಚರಿಕೆಯಾಗಿರಬೇಕೆಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅವರು, ರೊಟ್ಟಿ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಯೇಸು ಹೇಳಿದ್ದನ್ನು ಗ್ರಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತನ್ನಾ ಜೆಜು ಭಾಕ್ರಿತ್ ಘಾಲ್ತಲ್ಯಾ ಸೊಡ್ಯಾಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ ಮನುನ್ ಸಾಂಗಿನಾ ಹೊಲಾ. ಫಾರಿಜೆವಾ ಅನಿ ಸಾದುಸೆವಾ ಶಿಕ್ವುತಲ್ಯಾ ಶಿಕಾಪಾಂಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ ಮನುನ್ ಸಾಂಗುಕ್ ಲಾಗ್ಲಾ ಮನುನ್ ಶಿಸಾಕ್ನಿ ಕಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:12
7 ತಿಳಿವುಗಳ ಹೋಲಿಕೆ  

ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ ನೀವು ಪರಲೋಕರಾಜ್ಯದಲ್ಲಿ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.


ಯಾಕಂದರೆ - ಸತ್ತವರು ಎದ್ದುಬರುವದಿಲ್ಲವೆಂತಲೂ ದೇವದೂತನಾಗಲಿ ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂತಲೂ ಸದ್ದುಕಾಯರು ಹೇಳುವರು; ಆ ಎರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು.


ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?


ನಾನು ರೊಟ್ಟಿಯನ್ನು ಕುರಿತು ಮಾತಾಡಲಿಲ್ಲವೆಂಬದು ನಿಮಗೆ ತಿಳಿಯದೆ ಇರುವದು ಹೇಗೆ? ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಅಂದನು.


ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಿಕವೆಲ್ಲಾ ಹುಳಿಯಾಗುತ್ತದೆಂಬದು ನಿಮಗೆ ತಿಳಿಯದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು