Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:20 - ಕನ್ನಡ ಸತ್ಯವೇದವು J.V. (BSI)

20 ಆಗ ಆತನು - ನಾನು ಕ್ರಿಸ್ತನಾಗಿದ್ದೇನೆಂಬದನ್ನು ಯಾರಿಗೂ ಹೇಳಬೇಡಿರಿ ಎಂದು ಶಿಷ್ಯರಿಗೆ ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನಂತರ ಯೇಸು ತಮ್ಮ ಶಿಷ್ಯರಿಗೆ ತಾವು ‘ಅಭಿಷಿಕ್ತರಾದ ಲೋಕೋದ್ಧಾರಕ’ ಎಂಬುದನ್ನು ಯಾರಿಗೂ ಹೇಳಕೂಡದೆಂದು ಕಟ್ಟಪ್ಪಣೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಳಿಕ ಯೇಸು ತನ್ನ ಶಿಷ್ಯರಿಗೆ, ತಾನು ಕ್ರಿಸ್ತನೆಂಬುದನ್ನು ಯಾರಿಗೂ ಹೇಳಕೂಡದೆಂದು ಎಚ್ಚರಿಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತರುವಾಯ ಯೇಸು, ತಾನೇ ಕ್ರಿಸ್ತ ಎಂಬುದನ್ನು ಯಾರಿಗೂ ಹೇಳಬಾರದೆಂದು ತಮ್ಮ ಶಿಷ್ಯರಿಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಾನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಮಿಯಾಚ್ ಕ್ರಿಸ್ತ್ ಮನುನ್ ಕೊನಾಕ್‍ಬಿ ಸಾಂಗುನಕಾಸಿ ಮನುನ್ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:20
16 ತಿಳಿವುಗಳ ಹೋಲಿಕೆ  

ಅದಕ್ಕೆ ಆತನು - ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ ಎಂದು ಅವರಿಗೆ ಖಂಡಿತವಾಗಿ ಹೇಳಿದನು.


ಆಗ ಆತನು - ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆಕೊಟ್ಟು -


ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡುಕೊಂಡು ಅವನಿಗೆ - ಮೆಸ್ಸೀಯನು ನಮಗೆ ಸಿಕ್ಕಿದನು ಎಂದು ಹೇಳಿ


ಅವರು ಆ ಬೆಟ್ಟದಿಂದ ಇಳಿದುಬರುತ್ತಿರುವಾಗ ಯೇಸು ಅವರಿಗೆ - ನೀವು ಈಗ ಕಂಡ ದರ್ಶನವನ್ನು ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬೇಡಿರೆಂದು ಖಂಡಿತವಾಗಿ ಹೇಳಿದನು.


ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳೊಳಗೆ ಒಂದನ್ನಾದರೂ ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.


ಆಗ ಯೇಸು ಅವನಿಗೆ - ಯಾರಿಗೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇವಿುಸಿದ ಕಾಣಿಕೆಯನ್ನು ಕೊಡು; ಅದು ಜನರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.


ಯೇಸುವು ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ಯೇಸುವು ಕ್ರಿಸ್ತನಲ್ಲ ಎನ್ನುವವನು ಸುಳ್ಳುಗಾರನಲ್ಲವಾದರೆ ಸುಳ್ಳುಗಾರನು ಬೇರೆ ಎಲ್ಲಿದ್ದಾನೆ? ಯಾವನಾದರೂ ತಾನು ತಂದೆಯನ್ನೂ ಮಗನನ್ನೂ ಅರಿಯೆನು ಎಂದು ಹೇಳಿದರೆ ಅವನೇ ಕ್ರಿಸ್ತ ವಿರೋಧಿ.


ಆದದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಒಡೆಯನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ ಎಂದು ಹೇಳಿದನು.


ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ಫಿಲಿಪ್ಪನು ನತಾನಯೇಲನನ್ನು ಕಂಡುಕೊಂಡು ಅವನಿಗೆ - ಯಾವನ ವಿಷಯವಾಗಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನು ನಮಗೆ ಸಿಕ್ಕಿದನು; ಆತನು ಯಾರಂದರೆ ಯೋಸೇಫನ ಮಗನಾದ ನಜರೇತಿನ ಯೇಸು ಎಂದು ಹೇಳಿದನು.


ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ - ನೀವು ಕಂಡಿರುವದನ್ನು ಮನುಷ್ಯಕುಮಾರನು ಸತ್ತು ಜೀವಿತನಾಗಿ ಎದ್ದು ಬರುವತನಕ ಯಾರಿಗೂ ತಿಳಿಸಬಾರದೆಂದು ಖಂಡಿತವಾಗಿ ಹೇಳಿದನು.


ಯಾಕೋಬನು ಮರಿಯಳ ಗಂಡನಾದ ಯೋಸೇಫನನ್ನು ಪಡೆದನು. ಈ ಮರಿಯಳಲ್ಲಿ ಕ್ರಿಸ್ತನೆಂಬ ಯೇಸು ಹುಟ್ಟಿದನು.


ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.


ಅದೇನಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.


ಆಕೆ - ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಂಬಿದ್ದೇನೆ ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು