Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:23 - ಕನ್ನಡ ಸತ್ಯವೇದವು J.V. (BSI)

23 ಆತನು ತಿರುಗಿಕೊಂಡು ಪೇತ್ರನಿಗೆ - ಸೈತಾನನೇ, ನನ್ನ ಮುಂದೆ ನಿಲ್ಲಬೇಡ, ನಡೆ, ನನಗೆ ನೀನು ವಿಘ್ನವಾಗಿದ್ದೀ; ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಯೇಸು ಪೇತ್ರನಿಗೆ, “ಸೈತಾನನೇ, ಇಲ್ಲಿಂದ ತೊಲಗು! ನೀನು ನನಗೆ ಅಡ್ಡಿಯಾಗಿರುವೆ! ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ಜೆಜು ಪೆದ್ರುಕ್ಡೆ ಪರತ್ಲೊ. ಅನಿ,“ಸೈತಾನಾ; ಮಾಜೆಕ್ನಾ ಧುರ್ ಚಲ್! ತಿಯಾ ಮಾಜ್ಯಾ ವಾಟೆಕ್‍ ಎಕ್ ಅಡ್ಕಳ್ ಹೊವ್ಲೆ, ಕಶ್ಯಾಕ್ ಹೆ ತಿಯಾ ಯವಜ್ತಲೆ ದೆವಾಕ್ನಾ ಯೆವ್ಕ್ ‘ನಾ’ ಮಾನ್ಸಾಚ್ಯಾ ಸ್ವಬಾವಾತ್ನಾ ಯೆತಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:23
19 ತಿಳಿವುಗಳ ಹೋಲಿಕೆ  

ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು;


ಮೇಲಿರುವಂಥವುಗಳ ಮೇಲೆ ಮನಸ್ಸಿಡಿರಿ, ಭೂಸಂಬಂಧವಾದವುಗಳ ಮೇಲೆ ಇಡಬೇಡಿರಿ.


ಆತನು ಹಿಂತಿರುಗಿಕೊಂಡು ತನ್ನ ಶಿಷ್ಯರನ್ನು ನೋಡಿ ಪೇತ್ರನಿಗೆ - ಸೈತಾನನೇ, ನನ್ನ ಮುಂದೆ ನಿಲ್ಲಬೇಡ, ನಡೆ, ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ ಎಂದು ಗದರಿಸಿ ಹೇಳಿದನು.


ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.


ಅದಕ್ಕೆ ಯೇಸು - ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೋ? ನಿಮ್ಮಲ್ಲಿಯೂ ಒಬ್ಬನು ಸೈತಾನನ ಮಗನಾಗಿದ್ದಾನೆ ಅಂದನು.


ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಉತ್ತರಕೊಟ್ಟನು.


ಮತ್ತು ಪುರುಷನಿಗೆ - ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನೀನು ಹೆಂಡತಿಯ ಮಾತು ಕೇಳಿ ತಿಂದಕಾರಣ ನಿನ್ನ ನಿವಿುತ್ತ ಭೂವಿುಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ದುಡಿದು ದುಡಿದು ಭೂವಿುಯ ಹುಟ್ಟುವಳಿಯನ್ನು ತಿನ್ನಬೇಕು.


ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.


ಸೈತಾನನು ಇಸ್ರಾಯೇಲ್ಯರಿಗೆ ವಿರೋಧವಾಗಿ ಎದ್ದು ಖಾನೇಷುಮಾರಿಮಾಡುವದಕ್ಕೆ ದಾವೀದನನ್ನು ಪ್ರೇರಿಸಿದನು.


ಅದಕ್ಕೆ ದಾವೀದನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈಹೊತ್ತು ನನ್ನನ್ನು ಅಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿವಸದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವದು ಸರಿಯೋ? ನಾನು ಇಸ್ರಾಯೇಲ್ಯರ ಅರಸನೆಂಬದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು ಎಂದು ನುಡಿದನು.


ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಯೆರೂಸಲೇವಿುನ ನಿವಾಸಿಗಳಿಗೆ ಬಲೆಯೂ ಬೋನೂ ಆಗುವನು.


ಮಾಂಸ ತಿನ್ನುವದನ್ನಾಗಲಿ ದ್ರಾಕ್ಷಾರಸ ಕುಡಿಯುವದನ್ನಾಗಲಿ ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವದನ್ನಾಗಲಿ ಬಿಟ್ಟುಬಿಡುವದೇ ಒಳ್ಳೇದು.


ತೊಡಕುಗಳು ಬರುವದರಿಂದ ಲೋಕಕ್ಕೆ ಎಷ್ಟೋ ಕೇಡು! ತೊಡಕುಗಳು ಹೇಗಾದರೂ ಬರುವವು. ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ, ಅವನ ಗತಿಯನ್ನು ಏನು ಹೇಳಲಿ!


ಆಗ ಪೇತ್ರನು ಆತನ ಕೈಹಿಡಿದು - ಸ್ವಾಮೀ, ದೇವರು ನಿನ್ನನ್ನು ಕಾಯಲಿ; ನಿನಗೆ ಹೀಗೆ ಎಂದಿಗೂ ಆಗಬಾರದು ಎಂದು ಆತನನ್ನು ಗದರಿಸುವದಕ್ಕೆ ಪ್ರಾರಂಭಿಸಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು