Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:24 - ಕನ್ನಡ ಸತ್ಯವೇದವು J.V. (BSI)

24 ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ, ಜೆ ಕೊನಾಕ್ ಮಾಜ್ಯಾ ವಾಂಗ್ಡಾ ಯೆವ್ಕ್ ಮನ್ ಹಾಯ್ ತರ್ ತೆನಿ ಅಪ್ನಾಕುಚ್ ಇಸ್ರುನ್, ಕಸ್ಟ್ ಸೊಸುಕ್ ಅನಿ ಮರುಕ್ ಸೈತ್ ತಯಾರ್ ರ್‍ಹಾವ್ಚೆ, ಅನಿ ಮಾಜ್ಯಾ ಫಾಟ್ನಾ ಯೆವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:24
18 ತಿಳಿವುಗಳ ಹೋಲಿಕೆ  

ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನ ಹಿಂದೆ ಬಂದ ಹೊರತು ನನಗೆ ಯೋಗ್ಯನಲ್ಲ.


ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬಂದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.


ಯೇಸು ಅವನನ್ನು ದೃಷ್ಟಿಸಿನೋಡಿ ಪ್ರೀತಿಸಿ ಅವನಿಗೆ - ನಿನಗೆ ಒಂದು ಕಡಿಮೆಯಾಗಿದೆ; ಹೋಗು, ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವದಕ್ಕೆ ಮನಸ್ಸುಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ಆಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು. ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸುತ್ತೇನೆ.


ಅವರು ಯೇಸುವನ್ನು ತೆಗೆದುಕೊಂಡು ಹೋದರು; ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ಕಪಾಲಸ್ಥಳವೆಂಬ ಸ್ಥಾನಕ್ಕೆ ಹೋದನು. ಇದಕ್ಕೆ ಇಬ್ರಿಯ ಮಾತಿನಲ್ಲಿ ಗೊಲ್ಗೊಥಾ ಎಂದು ಹೆಸರು.


ಸಂಕಟಗಳನ್ನು ಅನುಭವಿಸುವದಕ್ಕಾಗಿ ನಾವು ನೇವಿುಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.


ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬವನನ್ನು ಕಂಡು ಅವನನ್ನು ಆತನ ಶಿಲುಬೆಯನ್ನು ಹೊರುವದಕ್ಕೆ ಬಿಟ್ಟೀಹಿಡಿದರು.


ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವದಕ್ಕೆ ಬಿಟ್ಟೀಹಿಡಿದರು. ಇವನು ಯಾರಂದರೆ - ಅಲೆಕ್ಸಾಂದ್ರ ರೂಫ ಎಂಬವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.


ಅವರು ಆತನನ್ನು ತೆಗೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆಪಟ್ಟಣದ ಸೀಮೋನನೆಂಬವನನ್ನು ಹಿಡಿದು ಶಿಲುಬೆಯನ್ನು ಅವನ ಮೇಲೆ ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.


ಅವನು ಎಂಥಾ ಸಾವಿನಿಂದ ದೇವರನ್ನು ಮಹಿಮೆಪಡಿಸುವನು ಎಂಬದನ್ನು ಆತನು ಈ ಮಾತಿನಿಂದ ಸೂಚಿಸಿದನು. ಇದನ್ನು ಹೇಳಿ ಆತನು ಅವನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಯೇಸು ಅವನಿಗೆ - ನಾನು ಬರುವ ತನಕ ಇವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು