Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:27 - ಕನ್ನಡ ಸತ್ಯವೇದವು J.V. (BSI)

27 ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾನ್ಸಾಚೊ ಲೆಕ್ ಅಪ್ನಾಚ್ಯಾ ಬಾಬಾಚ್ಯಾ ಮಹಿಮೆನ್ ಭರುನ್ ದೆವಾಚ್ಯಾ ದುತಾಂಚ್ಯಾ ವಾಂಗ್ಡಾ ಯೆತಲೊ ಹಾಯ್ ಅನಿ ತನ್ನಾ ತೊ ಸಗ್ಳ್ಯಾಕ್ನಿ ತೆಂಚ್ಯಾ ಕರ್ನಾಂಚ್ಯಾ ಪರ್‍ಕಾರ್ ತೆಂಕಾ-ತೆಂಕಾ ಭೊಮಾನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:27
45 ತಿಳಿವುಗಳ ಹೋಲಿಕೆ  

ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.


ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.


ಆತನು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು.


ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು ಹೃದಯವನ್ನು ಪರೀಕ್ಷಿಸುವವನೂ ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಯಾಕಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.


ಇಂಥವರ ವಿಷಯದಲ್ಲೇ ಆದಾಮನಿಗೆ ಏಳನೆಯ ತಲೆಯವನಾದ ಹನೋಕನು - ಇಗೋ ಕರ್ತನು ಲಕ್ಷಾಂತರ ಪರಿಶುದ್ಧದೂತರನ್ನು ಕೂಡಿಕೊಂಡು


ಇದು ನನಗೆ ಗೊತ್ತಿರಲಿಲ್ಲ ಎಂದು ನೀನು ನೆವ ಹೇಳಿದರೆ ಹೃದಯಶೋಧಕನು ಗ್ರಹಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆಬಿಟ್ಟಾನೇ?


ಇದಲ್ಲದೆ ಸತ್ತವರಾದ ದೊಡ್ಡವರೂ ಚಿಕ್ಕವರೂ ಸಿಂಹಾಸನದ ಮುಂದೆ ನಿಂತಿರುವದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಮತ್ತು ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ ಸತ್ತವರಿಗೆ ನ್ಯಾಯತೀರ್ಪಾಯಿತು.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು, ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸ ಮಾಡುವನು.


ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಎಲ್ಲಾ ದೇವದೂತರೊಂದಿಗೆ ಕೂಡಿಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕೂತುಕೊಳ್ಳುವನು;


ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ;


ಆಗ ಮನುಷ್ಯಕುಮಾರನು ಬಲದಿಂದಲೂ ಬಹುಮಹಿಮೆಯಿಂದಲೂ ಮೇಘದಲ್ಲಿ ಬರುವದನ್ನು ಕಾಣುವರು.


ಯೇಸು - ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳೊಂದಿಗೆ ಬರುವದನ್ನೂ ನೋಡುವಿರಿ ಅಂದನು.


ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಸಂತತಿಯಲ್ಲಿ ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ ನಾಚಿಕೊಳ್ಳುವನು ಅಂದನು.


ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವದು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವದನ್ನು ಕಾಣುವರು.


ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಕ್ಕೆ ಓಡಿಹೋಗುವಿರಿ; ಏಕಂದರೆ ಆ ಡೊಂಗರವು ಆಚೆಲಿಗೆ ಮುಟ್ಟಿರುವದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ನನ್ನ ದೇವರಾದ ಯೆಹೋವನು ಸಮಸ್ತ ದೇವದೂತಸಮೇತ ಬರುವನು.


ಅರಸನು ದುಃಖಿಸುವನು. ದಿಗಿಲು ಪ್ರಭುವನ್ನು ಮುಸುಕುವದು, ಸಾಧಾರಣ ಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಕ್ಕೆ ಸೇರಿಸಲ್ಪಟ್ಟಿರುವ ಈ ಯೇಸು ಯಾವ ರೀತಿಯಲ್ಲಿ ಆಕಾಶದೊಳಕ್ಕೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.


ನೀನೇ ಹೇಳಿದ್ದೀ; ಇದಲ್ಲದೆ ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳ ಮೇಲೆ ಕುಳಿತು ಬರುವದನ್ನೂ ಕಾಣುವಿರಿ ಎಂದು ನಿಮಗೆ ಹೇಳುತ್ತೇನೆ ಅಂದನು.


ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರಲಾಗಿ ಈ ಲೋಕದಲ್ಲಿ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯುಳ್ಳವರಾಗಿ ಕಳೆಯಿರಿ.


ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು ಎಂದು ಹೇಳಿದನು.


ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಪ್ರಭಾವದೊಡನೆ ಬರುವಾಗ ನಾಚಿಕೊಳ್ಳುವನು.


ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವದು. ದೇವದೂತರು ಹೊರಟುಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆಮಾಡಿ ಅವರನ್ನು ಬೆಂಕೀಕೊಂಡದಲ್ಲಿ ಹಾಕುವರು.


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ಪ್ರಧಾನದೂತನ ಶಬ್ದದೊಡನೆಯೂ ದೇವರ ತುತೂರಿಧ್ವನಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು; ಅವರು ಆತನ ರಾಜ್ಯದೊಳಗಿಂದ ಎಲ್ಲಾ ಕಂಟಕರನ್ನೂ


ಆದರೆ ಆಹಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸಲಾಗದು. ತಿನ್ನದಿದ್ದರೆ ನಮಗೆ ಕಡಿಮೆಯಿಲ್ಲ, ತಿಂದರೆ ನಮಗೆ ಹೆಚ್ಚಿಲ್ಲ.


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ಆಗ ನಾನು ಮನಸ್ಸಿನಲ್ಲಿ - ದೇವರು ಧರ್ಮಿಗಳಿಗೂ ಅಧರ್ಮಿಗಳಿಗೂ ನ್ಯಾಯತೀರಿಸುವನು.; ಆತನ ನ್ಯಾಯಕ್ರಮದಲ್ಲಿ ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯವುಂಟಲ್ಲವೆ ಅಂದುಕೊಂಡೆನು.


ಪಾಪಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು, ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಯೇಸು ಅವನಿಗೆ - ನಾನು ಬರುವ ತನಕ ಇವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಇದರ ದೆಸೆಯಿಂದ ಆ ಶಿಷ್ಯನು ಸಾಯುವದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಆತನು ಹೇಳಿದನು.


ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.


ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿರುವನು. ಕ್ರಿಸ್ತನು ಪ್ರಥಮಫಲ; ತರುವಾಯ ಕ್ರಿಸ್ತನ ಪ್ರತ್ಯಕ್ಷತೆಯಲ್ಲಿ ಆತನವರು ಎದ್ದುಬರುವರು.


ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವನಷ್ಟೆ; ಪಕ್ಷಪಾತವಿರುವದಿಲ್ಲ.


ಸಹೋದರರೇ, ಕರ್ತನು ಪ್ರತ್ಯಕ್ಷನಾಗುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂವಿುಯ ಬೆಲೆಯುಳ್ಳ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.


ಪ್ರಿಯರಾದ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು