Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:4 - ಕನ್ನಡ ಸತ್ಯವೇದವು J.V. (BSI)

4 ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ; ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ ಎಂದು ಉತ್ತರಕೊಟ್ಟು ಅವರನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಆ ಸ್ಥಳವನ್ನು ಬಿಟ್ಟು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹ್ಯಾ ಕಾಲಾಚಿ ದೆವಸ್ಪಾನ್‍ನಸಲ್ಲಿ ಅನಿ ಬುರ್ಶಿ ಲೊಕಾ! ಮಾಜೆಕ್ಡೆ ವಿಚಿತ್ರ್ ಕಾಮ್ ಇಚಾರ್‍ತ್ಯಾತ್? ನಾ, ಹೆ ಕರುನ್ ದಾಕ್ವುಕ್ ಹೊಯ್ನಾ, ತುಮ್ಕಾ ಎಕುಚ್ ಎಕ್ ವಿಚಿತ್ರ್ ದಿಲ್ಲೆ ಹಾಯ್ ತೆ ಜೊನಾಚ್ಯಾ ಜಿವನಾತ್ಲೆ ವಿಚಿತ್ರ್. ಮನುನ್ ಜಬಾಬ್ ದಿಲ್ಯಾನ್, ತೆಚೆಸಾಟ್ನಿ ತೆನಿ ತೆಂಕಾ ಥೈಚ್ ಸೊಡ್ಲ್ಯಾನ್ ಅನಿ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:4
15 ತಿಳಿವುಗಳ ಹೋಲಿಕೆ  

ಇತ್ತ ಯೋನನನ್ನು ನುಂಗಲು ಯೆಹೋವನು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.


ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಸಂತತಿಯಲ್ಲಿ ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ ನಾಚಿಕೊಳ್ಳುವನು ಅಂದನು.


ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವದು ಯಾಕೆ? ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಸೂಚಕಕಾರ್ಯವು ಸಿಕ್ಕುವದೇ ಇಲ್ಲ ಎಂದು ಹೇಳಿ


ಅವರ ಮಾತನ್ನು ಬಿಡಿರಿ; ತಾವೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸುವದಕ್ಕೆ ಹೋಗುತ್ತಾರೆ; ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಕುಣಿಯಲ್ಲಿ ಬೀಳುವರು ಅಂದನು.


ಆಗ ಯೆಹೋವನು - ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿರುವದಿಲ್ಲ; ಅವರು ಭ್ರಷ್ಟರಾದದರಿಂದ ಮರ್ತ್ಯರೇ. ಅವರ ಆಯುಷ್ಯವು ನೂರ ಇಪ್ಪತ್ತು ವರುಷವಾಗಿರಲಿ ಅಂದನು.


ಅವರು ಎದುರಿಸಿ ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ - ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಇಂದಿನಿಂದ ಶುದ್ಧಮನಸ್ಸುಳ್ಳವನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಯಾವನೂ ಉಳಿಯದೆ ಇರುವ ತನಕ ಅವರಿಗೆ ಪುತ್ರಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!


ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.


ಬೇರೆ ಅನೇಕವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು - ವಕ್ರಬುದ್ಧಿಯುಳ್ಳ ಈ ಸಂತತಿಯವರಿಂದ ತಪ್ಪಿಸಿಕೊಳ್ಳಿರಿ ಎಂದು ಅವರನ್ನು ಎಚ್ಚರಿಸಿದನು.


ಮಾಟಗಾತಿಯ ಮಕ್ಕಳೇ, ಸೂಳೆಗಾರನ ಮತ್ತು ಸೂಳೆಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ! ಯಾರನ್ನು ಅಣಕಿಸಿ ವಿನೋದ ಪಡುತ್ತೀರಿ?


ಯೆಹೋವನು ಅವಿುತ್ತೈಯ ಮಗನಾದ ಯೋನನಿಗೆ -


ಶಿಷ್ಯರು ರೊಟ್ಟೀಬುತ್ತಿ ಕಟ್ಟಿಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಾಗ ಯೇಸು ಅವರಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು