Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:8 - ಕನ್ನಡ ಸತ್ಯವೇದವು J.V. (BSI)

8 ಯೇಸು ಅದನ್ನು ತಿಳಿದು - ಅಲ್ಪವಿಶ್ವಾಸಿಗಳೇ, ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಮಾತಾಡಿಕೊಳ್ಳುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದನ್ನು ಗಮನಿಸಿದ ಯೇಸು, “ಅಲ್ಪವಿಶ್ವಾಸಿಗಳೇ, ರೊಟ್ಟಿಯನ್ನು ತಂದಿಲ್ಲವೆಂದು ನಿಮ್ಮನಿಮ್ಮಲ್ಲೇ ಚರ್ಚೆ ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಶಿಷ್ಯರು ಈ ವಿಷಯವನ್ನು ಚರ್ಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಅವರಿಗೆ, “ರೊಟ್ಟಿ ಇಲ್ಲವಲ್ಲಾ ಎಂಬ ವಿಷಯದಲ್ಲಿ ನೀವು ಮಾತಾಡಿಕೊಳ್ಳುತ್ತಿರುವುದೇಕೆ? ಅಲ್ಪ ವಿಶ್ವಾಸಿಗಳೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ಅಲ್ಪ ವಿಶ್ವಾಸದವರೇ, ನೀವು ರೊಟ್ಟಿ ಇಲ್ಲವೆಂದು ನಿಮ್ಮಲ್ಲಿ ಏಕೆ ಮಾತನಾಡಿಕೊಳ್ಳುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆನಿ ಕಾಚ್ಯಾ ವಿಶಯಾತ್ ಬೊಲುಲ್ಯಾತ್ ಮನುನ್ ಜೆಜುಕ್ ಕಳ್ಳೆ. ತಸೆಮನುನ್ ತೆನಿ ತೆಂಕಾ,“ಎಕ್‍ಬಿ ಭಾಕ್ರಿ ತುಮ್ಚ್ಯಾಕ್ಡೆ ನಸಲ್ಲ್ಯಾ ವಿಶಯಾತ್ ತುಮಿ ಕಶ್ಯಾಕ್ ಬೊಲುಲಾಲ್ಯಾಶಿ? ಕವ್ಡೊ ಕಮಿ ವಿಶ್ವಾಸ್! ತುಮ್ಚೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:8
9 ತಿಳಿವುಗಳ ಹೋಲಿಕೆ  

ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ.


ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು.


ತರುವಾಯ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕೂತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ಕಂಡವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಆತನು ಅವರಿಗೆ - ಅಲ್ಪವಿಶ್ವಾಸಿಗಳೇ, ಯಾಕೆ ಧೈರ್ಯಗೆಡುತ್ತೀರಿ ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಎಲ್ಲಾ ಶಾಂತವಾಯಿತು.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ನೀನು ಸಮಸ್ತವನ್ನು ತಿಳಿದವನೆಂದೂ ನಿನಗೆ ಪ್ರಶ್ನೆಮಾಡಬೇಕಾದ ಅವಶ್ಯವಿಲ್ಲವೆಂದೂ ಈಗ ತಿಳಿಯಿತು; ಇದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೆಂದು ನಂಬುತ್ತೇವೆ ಅಂದದ್ದಕ್ಕೆ


ನಾವು ರೊಟ್ಟೀಬುತ್ತಿ ಕಟ್ಟಿಕೊಳ್ಳದೆ ಬಂದೆವಲ್ಲಾ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು