Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:20 - ಕನ್ನಡ ಸತ್ಯವೇದವು J.V. (BSI)

20 ನಿಮ್ಮ ನಂಬಿಕೆ ಕಡಿಮೆಯಾಗಿರುವದರಿಂದಲೇ ಆಗಲಿಲ್ಲ; ನಿಮಗೆ ಸತ್ಯವಾಗಿ ಹೇಳುತ್ತೇನೆ, ಸಾಸಿವೇಕಾಳಷ್ಟು ನಂಬಿಕೆ ನಿಮಗೆ ಇರುವದಾದರೆ ನೀವು ಈ ಬೆಟ್ಟಕ್ಕೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ಜೆಜುನ್, “ವಿಶ್ವಾಸ್ ಕಮಿ ಹೊತ್ತ್ಯಾಕ್ ತುಮ್ಕಾ ಸೊಡ್ಸುಕ್ ಹೊವ್ಕ್ ನಾ. ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಎಕ್ ಸಾಸಾವಾಚ್ಯಾ ಭ್ಹಿಂಯಾ ತವ್ಡೊ ವಿಶ್ವಾಸ್ ತುಮ್ಕಾ ರ್‍ಹಾಲ್ಯಾರ್ ತುಮಿ ಹ್ಯಾ ಮಡ್ಡಿಕ್ ಹಿತ್ನಾ-ಥೈ ಜಾವ್ನ್ ರ್‍ಹಾ! ಮನುನ್ ಸಾಂಗಟ್ಲ್ಯಾರ್ ತಿ ಜಾತಾ, ತುಮಿ ಕಾಯ್ ಪಾಜೆ ತೆ ಕರುಕ್ ಹೊತಾ,” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:20
19 ತಿಳಿವುಗಳ ಹೋಲಿಕೆ  

ಸ್ವಾವಿುಯು - ಸಾಸಿವೇ ಕಾಳಷ್ಟು ನಂಬಿಕೆ ನಿಮಗಿದ್ದರೆ ನೀವು ಈ ಅತ್ತೀಮರಕ್ಕೆ - ನೀನು ಬೇರು ಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವದು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ - ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವದು.


ಆತನು - ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ ಅಂದನು.


ದೇವರಿಂದ ಬರುವ ಯಾವ ಮಾತಾದರೂ ನಿಷ್ಫಲವಾಗುವದಿಲ್ಲ ಅಂದನು.


ಅದಕ್ಕೆ ಯೇಸು - ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ನಾನು ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ. ಇದು ಮಾತ್ರವಲ್ಲದೆ ಈ ಬೆಟ್ಟಕ್ಕೆ - ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೆ ಅದೂ ಆಗುವದು.


ಯೇಸು ಅವನಿಗೆ - ನಿನ್ನ ಕೈಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ? ನಂಬುವವನಿಗೆ ಎಲ್ಲಾ ಆಗುವದು ಎಂದು ಹೇಳಿದನು.


ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.


ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕರಾಜ್ಯವು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.


ಯೇಸು ಆಕೆಗೆ - ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಎಂದು ಉತ್ತರಕೊಟ್ಟನು.


ಅದು ಸಾಸಿವೆ ಕಾಳಿನಂತಿರುತ್ತದೆ. ಭೂವಿುಯಲ್ಲಿ ಬಿತ್ತುವಾಗ ಅದು ಭೂವಿುಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.


ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.


ಅದಕ್ಕೆ ಯೇಸು - ಎಲಾ, ನಂಬಿಕೆಯಿಲ್ಲದಂಥ ಮೂರ್ಖ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.


ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಒಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು,


ಅವರು ಆ ಬೆಟ್ಟದಿಂದ ಇಳಿದುಬರುತ್ತಿರುವಾಗ ಯೇಸು ಅವರಿಗೆ - ನೀವು ಈಗ ಕಂಡ ದರ್ಶನವನ್ನು ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬೇಡಿರೆಂದು ಖಂಡಿತವಾಗಿ ಹೇಳಿದನು.


ಆತನು ಅವರಿಗೆ - ಅಲ್ಪವಿಶ್ವಾಸಿಗಳೇ, ಯಾಕೆ ಧೈರ್ಯಗೆಡುತ್ತೀರಿ ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಎಲ್ಲಾ ಶಾಂತವಾಯಿತು.


ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು - ಅದನ್ನು ಬಿಡಿಸಲಿಕ್ಕೆ ನವ್ಮಿುಂದ ಯಾಕೆ ಆಗಲಿಲ್ಲವೆಂದು ಕೇಳಲು ಆತನು ಅವರಿಗೆ -


ಯೇಸು ಹೇಳಿದ್ದೇನಂದರೆ - ನಿಮಗೆ ದೇವರಲ್ಲಿ ನಂಬಿಕೆಯಿರಲಿ.


ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು