Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:22 - ಕನ್ನಡ ಸತ್ಯವೇದವು J.V. (BSI)

22 ಅವರು ಗಲಿಲಾಯದಲ್ಲಿ ಗುಂಪುಗುಂಪಾಗಿ ಕೂಡುತ್ತಿರುವಾಗ ಯೇಸು ಅವರಿಗೆ - ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಿಕೊಡಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಶಿಷ್ಯರೆಲ್ಲರು ಒಮ್ಮೆ ಗಲಿಲೇಯದಲ್ಲಿ ಒಟ್ಟಿಗೆ ಸೇರಿದ್ದರು. ಆಗ ಯೇಸು ಅವರಿಗೆ, “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಒಮ್ಮೆ ಶಿಷ್ಯರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದರು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದಾಗ ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಸಗ್ಳಿ ಶಿಸಾ ಗಾಲಿಲಿಯಾತ್ ಎಕಾಕ್ಡೆ ಯೆವ್ನ್ ಗೊಳಾ ಹೊಲ್ಲ್ಯಾ ತನ್ನಾ, ಜೆಜುನ್ ತೆಂಕಾ, “ಮಾನ್ಸಾಚ್ಯಾ ಲೆಕಾಕ್ ಲೊಕಾಂಚ್ಯಾ ಹಾತಿತ್ ಧರುನ್ ದಿತಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:22
21 ತಿಳಿವುಗಳ ಹೋಲಿಕೆ  

ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು.


ಇದಲ್ಲದೆ ಆತನು - ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತವಾಗಿ ಕೊಲ್ಲಲ್ಪಟ್ಟು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವದಕ್ಕೆ ಪ್ರಾರಂಭಮಾಡಿದನು.


ಅವರು ಆತನನ್ನು ಕೊಲ್ಲುವರು; ಸತ್ತ ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.


ಅವರಿಗೆ - ಕ್ರಿಸ್ತನು ಶ್ರಮೆಪಟ್ಟು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದುಬರುವನೆಂತಲೂ


ಕ್ರಿಸ್ತನು ಇಂಥ ಶ್ರಮಗಳನ್ನು ಅನುಭವಿಸಿ ತನ್ನ ಮಹಾಪದವಿಗೆ ಸೇರುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ


ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ ಎಂದು ಹೇಳಿದನು.


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ಏಳಿರಿ, ಹೋಗೋಣ; ನನ್ನನ್ನು ಹಿಡುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ ಎಂದು ಹೇಳಿದನು.


ಆಗ ಅನೇಕರು ಹಿಂಜರಿದು ಒಬ್ಬರನ್ನೊಬ್ಬರು ಹಿಡುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.


ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.


ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ - ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು -


ಅಂದಿನಿಂದ ಅವನು ಆತನನ್ನು ಹಿಡುಕೊಡುವದಕ್ಕೆ ಅನುಕೂಲವಾದ ಸಮಯವನ್ನು ನೋಡುತ್ತಿದ್ದನು.


ಅವರು ಆ ಬೆಟ್ಟದಿಂದ ಇಳಿದುಬರುತ್ತಿರುವಾಗ ಯೇಸು ಅವರಿಗೆ - ನೀವು ಈಗ ಕಂಡ ದರ್ಶನವನ್ನು ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬೇಡಿರೆಂದು ಖಂಡಿತವಾಗಿ ಹೇಳಿದನು.


ಆದರೆ ನಾನು ನಿಮಗೆ ಹೇಳುವದೇನಂದರೆ, ಎಲೀಯನು ಬಂದು ಹೋದನು; ಜನರು ಅವನ ಗುರುತು ಅರಿಯದೆ ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು. ಅವನಿಗಾದಂತೆ ಮನುಷ್ಯಕುಮಾರನಿಗೆ ಸಹ ಅವರ ಕಡೆಯಿಂದ ಹಿಂಸೆಯಾಗುವದು ಎಂದು ಉತ್ತರಕೊಟ್ಟನು.


ಅದನ್ನು ನೋಡಿ ಎಲ್ಲರು ದೇವರ ಮಹತ್ವಕ್ಕೆ ಬೆರಗಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು