Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:3 - ಕನ್ನಡ ಸತ್ಯವೇದವು J.V. (BSI)

3 ಇದಲ್ಲದೆ ಮೋಶೆಯೂ ಎಲೀಯನೂ ಆತನ ಸಂಗಡ ಮಾತಾಡುತ್ತಾ ಅವರಿಗೆ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಗೋ, ಮೋಶೆಯೂ ಎಲೀಯನೂ ಆತನ ಸಂಗಡ ಮಾತನಾಡುತ್ತಾ ಅವರಿಗೆ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದ್ದಕ್ಕಿದ್ದ ಹಾಗೆ ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಅವರಿಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಲ್ಲದೆ ಆತನೊಂದಿಗೆ ಇಬ್ಬರು ಪುರುಷರು ಮಾತಾಡುತ್ತಾ ನಿಂತಿದ್ದರು. ಅವರೇ ಮೋಶೆ ಮತ್ತು ಎಲೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ತಿನಿಬಿ ಶಿಸಾನಿ ಮೊಯ್ಜೆ ಅನಿ ಎಲಿಯಾ ಜೆಜುಕ್ಡೆ ಬೊಲ್ತಲೆ ಬಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:3
22 ತಿಳಿವುಗಳ ಹೋಲಿಕೆ  

ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.


ಇದಲ್ಲದೆ ಎಲೀಯನೂ ಮೋಶೆಯೂ ಅವರಿಗೆ ಕಾಣಿಸಿಕೊಂಡು ಯೇಸುವಿನ ಸಂಗಡ ಮಾತಾಡುತ್ತಿದ್ದರು.


ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಧರ್ಮಶಾಸ್ತ್ರವೂ ಪ್ರವಾದಿಗಳೂ ಯೋಹಾನನ ತನಕವೇ. ಈಚೆಗೆ ದೇವರ ರಾಜ್ಯವು ಸಾರಲ್ಪಡುತ್ತಾ ಇದೆ. ಅದರಲ್ಲಿ ಸಕಲರೂ ಬಲಾತ್ಕಾರವಾಗಿ ನುಗ್ಗುತ್ತಾರೆ.


ಇವರು ಆತನನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ - ಗುರುವೇ ನಾವು ಇಲ್ಲೇ ಇರುವದು ಒಳ್ಳೇದು, ಮೂರು ಪರ್ಣಶಾಲೆಗಳನ್ನು ಕಟ್ಟುವೆವು; ನಿನಗೊಂದು ಮೋಶೆಗೊಂದು ಎಲೀಯನಿಗೊಂದು ಎಂದು ಹೇಳಿದನು. ತಾನಂದದ್ದು ತನಗೇ ಗೊತ್ತಾಗಲಿಲ್ಲ.


ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಹಟಹಿಡಿದವರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ ಸಿದ್ಧವಾದ ಜನವನ್ನು ಕರ್ತನಿಗೆ ಒದಗಿಸುವನು ಎಂದು ಹೇಳಿದನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ - ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಾಣೆ, ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರುಷಗಳವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವದಿಲ್ಲ ಅಂದನು.


ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಬಳಿಕೆಯಾಗಿದ್ದನು.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು; ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು; ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.


ಆಗ ಪೇತ್ರನು ಯೇಸುವಿಗೆ - ಸ್ವಾಮೀ, ನಾವು ಇಲ್ಲೇ ಇರುವದು ಒಳ್ಳೇದು. ಅಪ್ಪಣೆಯಾದರೆ ಇಲ್ಲಿ ಮೂರು ಪರ್ಣಶಾಲೆಗಳನ್ನು ಕಟ್ಟುವೆನು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು