Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:9 - ಕನ್ನಡ ಸತ್ಯವೇದವು J.V. (BSI)

9 ಅವರು ಆ ಬೆಟ್ಟದಿಂದ ಇಳಿದುಬರುತ್ತಿರುವಾಗ ಯೇಸು ಅವರಿಗೆ - ನೀವು ಈಗ ಕಂಡ ದರ್ಶನವನ್ನು ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬೇಡಿರೆಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರೆಲ್ಲರು ಬೆಟ್ಟದಿಂದ ಇಳಿದುಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆನಿ ಮಡ್ಡಿ ವೈನಾ ಉತ್ರುನ್ ಯೆತಾನಾ, ತುಮಿ ಮಡ್ಡಿ ವರ್‍ತಿ ಬಗಟಲ್ಲೆ, ಮಾನ್ಸಾಚೊ ಲೆಕ್ ಮರುನ್ ಝಿತ್ತೊ ಹೊಯ್ ಪತರ್ ಕೊನಾಕ್ಬಿ ಸಾಂಗುನಕಾಸಿ ಮನುನ್ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:9
16 ತಿಳಿವುಗಳ ಹೋಲಿಕೆ  

ಅದಕ್ಕೆ ಆತನು - ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ ಎಂದು ಅವರಿಗೆ ಖಂಡಿತವಾಗಿ ಹೇಳಿದನು.


ಆಕೆಯ ತಂದೆತಾಯಿಗಳು ಬೆರಗಾದರು. ಆತನು - ಈ ನಡೆದ ಸಂಗತಿಯನ್ನು ಯಾರಿಗೂ ತಿಳಿಸಬೇಡಿರೆಂದು ಖಂಡಿತವಾಗಿ ಹೇಳಿದನು.


ಅವರು ಆತನನ್ನು ಕೊಲ್ಲುವರು; ಸತ್ತ ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.


ಆದರೆ ನಾನು ನಿಮಗೆ ಹೇಳುವದೇನಂದರೆ, ಎಲೀಯನು ಬಂದು ಹೋದನು; ಜನರು ಅವನ ಗುರುತು ಅರಿಯದೆ ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು. ಅವನಿಗಾದಂತೆ ಮನುಷ್ಯಕುಮಾರನಿಗೆ ಸಹ ಅವರ ಕಡೆಯಿಂದ ಹಿಂಸೆಯಾಗುವದು ಎಂದು ಉತ್ತರಕೊಟ್ಟನು.


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ಆಗ ಯೇಸು ಅವನಿಗೆ - ಯಾರಿಗೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇವಿುಸಿದ ಕಾಣಿಕೆಯನ್ನು ಕೊಡು; ಅದು ಜನರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.


ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತಾನು ಇಂಥವನೆಂಬದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು.


ಅವರು ಕಣ್ಣೆತ್ತಿ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.


ನಿಮ್ಮ ನಂಬಿಕೆ ಕಡಿಮೆಯಾಗಿರುವದರಿಂದಲೇ ಆಗಲಿಲ್ಲ; ನಿಮಗೆ ಸತ್ಯವಾಗಿ ಹೇಳುತ್ತೇನೆ, ಸಾಸಿವೇಕಾಳಷ್ಟು ನಂಬಿಕೆ ನಿಮಗೆ ಇರುವದಾದರೆ ನೀವು ಈ ಬೆಟ್ಟಕ್ಕೆ -


ಅವರು ಗಲಿಲಾಯದಲ್ಲಿ ಗುಂಪುಗುಂಪಾಗಿ ಕೂಡುತ್ತಿರುವಾಗ ಯೇಸು ಅವರಿಗೆ - ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಿಕೊಡಲ್ಪಡುವನು.


ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳೊಳಗೆ ಒಂದನ್ನಾದರೂ ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು