Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:15 - ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ನಿನ್ನ ಸಹೋದರನು ತಪ್ಪುಮಾಡಿದರೆ ನೀನು ಹೋಗಿ ನೀನೂ ಅವನೂ ಇಬ್ಬರೇ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಿನ್ನ ಸಹೋದರನಾಗಲಿ ಸಹೋದರಿಯಾಗಲಿ ನಿನಗೆ ಯಾವುದಾದರೂ ತಪ್ಪು ಮಾಡಿದರೆ, ನೀನು ಹೋಗಿ ಅವನೊಬ್ಬನೇ ಇರುವಾಗ ಅವನ ತಪ್ಪನ್ನು ತಿಳಿಸು. ಅವನು ನಿನ್ನ ಮಾತಿಗೆ ಕಿವಿಗೊಟ್ಟರೆ, ಮತ್ತೆ ನಿನ್ನ ಸಹೋದರನಾಗಿರಲು ನೀನೇ ಅವನಿಗೆ ಸಹಾಯ ಮಾಡಿದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜರ್ ತರ್ ಎಕ್ ಭಾವಾನ್, ತುಮ್ಚ್ಯಾ ವಿರೊದ್ ಜಾವ್ನ್ ಪಾಪ್ ಕರ್ಲ್ಯಾರ್, ತೆಕಾ ಕಡೆಕ್ ಬಲ್ವುನ್ ಘೆವ್ನ್ ತೆಚಿ ಚುಕ್ ತೆಕಾ ದಾಕ್ವುನ್ ದಿವಾ, ತೆನಿ ತುಮಿ ಸಾಂಗಲ್ಲೆ ಆಯಿಕ್ಲ್ಯಾನ್ ತರ್ ತಿಯಾ ತುಜ್ಯಾ ಭಾವಾಕ್ ಜಿಕ್ಲ್ಯಾ ಸರ್ಕೆ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:15
21 ತಿಳಿವುಗಳ ಹೋಲಿಕೆ  

ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.


ಮತ್ತೊಬ್ಬನ ಮೇಲೆ ತಪ್ಪುಹೊರಿಸುವದಕ್ಕೆ ಕಾರಣವಿದ್ದರೂ ತಪ್ಪುಹೊರಿಸದೆ ಒಬ್ಬರಿಗೊಬ್ಬರು ಸೈರಿಸಿಕೊಂಡು ಕ್ಷವಿುಸಿರಿ. ಕರ್ತನು ನಿಮ್ಮನ್ನು ಕ್ಷವಿುಸಿದಂತೆಯೇ ನೀವೂ ಕ್ಷವಿುಸಿರಿ.


ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವದೋ ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮನಿಂದ ನಡಿಸಿಕೊಳ್ಳುವ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀನಾದರೋ ದುಷ್ಪ್ರೇರಣೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.


ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸಹೋದರನಿಗೆ ಮನಃಪೂರ್ವಕವಾಗಿ ಕ್ಷವಿುಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗುಪಕಾರ; ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ; ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರೋಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ಕೆಟ್ಟತನಕ್ಕೆ ಸೋತು ಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.


ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ಹೀಗಿರಲಾಗಿ ಸಹೋದರರಿಗೆ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ಪಾಪಮಾಡುವವರಾಗುತ್ತೀರಿ.


ಧರ್ಮಾತ್ಮನ ಫಲ ಜೀವವೃಕ್ಷ; ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ನಾನು ನಿಮಗೆ ಬರೆದಾಗ ಅನ್ಯಾಯಮಾಡಿದವನಿಗೆ ದಂಡನೆಯೂ ಅನ್ಯಾಯಹೊಂದಿದವನಿಗೆ ನ್ಯಾಯವೂ ಆಗಬೇಕೆಂಬುವ ಕಾರಣದಿಂದ ಬರೆಯಲಿಲ್ಲ; ನಮಗೋಸ್ಕರ ನಿಮಗಿರುವ ಆಸಕ್ತಿಯು ದೇವರ ಮುಂದೆ ನಿಮಗೆ ವ್ಯಕ್ತವಾಗಬೇಕೆಂಬುವ ಉದ್ದೇಶದಿಂದಲೇ ಬರೆದೆನು.


ಧರ್ಮಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡುಮಾಡಬಾರದು. ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವವನಾಗಿದ್ದಾನೆ.


ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ಕೆಟ್ಟುಹೋಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.


ಆಗ ಪೇತ್ರನು ಆತನ ಬಳಿಗೆ ಬಂದು - ಸ್ವಾಮೀ, ನನ್ನ ಸಹೋದರನು ನನಗೆ ತಪ್ಪುಮಾಡುತ್ತಾ ಬಂದರೆ ನಾನು ಎಷ್ಟು ಸಾರಿ ಅವನಿಗೆ ಕ್ಷವಿುಸಬೇಕು? ಏಳು ಸಾರಿಯೋ ಎಂದು ಕೇಳಲು


ಸಭೆಯಲ್ಲಿ ಭೇದಹುಟ್ಟಿಸುವ ಮನುಷ್ಯನನ್ನು ಎರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು