Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:16 - ಕನ್ನಡ ಸತ್ಯವೇದವು J.V. (BSI)

16 ಅವನು ಕೇಳದೆಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪನೆಯಾಗುವ ಹಾಗೆ ಇನ್ನೂ ಒಬ್ಬಿಬ್ಬರನ್ನು ನಿನ್ನ ಸಂಗಡ ಕರಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಅವನು ನಿನ್ನ ಮಾತನ್ನು ಕೇಳದಿದ್ದರೆ, ನಿನ್ನೊಂದಿಗೆ ಒಬ್ಬಿಬ್ಬರನ್ನು ಕರೆದುಕೊಂಡು ಮತ್ತೆ ಅವನ ಬಳಿಗೆ ಹೋಗು. ಆಗ ಪ್ರತಿಯೊಂದು ದೂರಿನ ವಿಷಯದಲ್ಲೂ ಇಬ್ಬರು ಅಥವಾ ಮೂವರು ಸಾಕ್ಷಿಗಳಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜರ್ ತೊ ತುಮಿ ಸಾಂಗಟಲ್ಲ್ಯಾ ಗೊಸ್ಟಿಕ್ ಆಯ್ಕಿನಸ್ಲ್ಯಾರ್ ತರ್ ಎಕ್ ದೊಗೆ ಜಾನಾಕ್ನಿ ತುಮ್ಚ್ಯಾ ವಾಂಗ್ಡಾ ಬಲ್ವುನ್ ಘೆವ್ನ್ ಜಾಂವಾ, ಅನಿ ತೆಕಾ ಸಾಂಗಾ, ಕಶ್ಯಾಕ್ ಮಟ್ಲ್ಯಾರ್, ಖಲ್ಯಾಬಿ ಚುಕೆಕ್ ದೊಗೆ ಜಾನಾ ಸಾಕ್ಷಿ ರ್‍ಹಾಲ್ಯಾರ್ ತಿ ಚುಕ್ ಖರಿ ಮನುನ್ ಮಾನುನ್ ಘೆವ್ಕ್ ಹೊತಾ. ಮನುನ್ ಪವಿತ್ರ್ ಪುಸ್ತಕ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:16
10 ತಿಳಿವುಗಳ ಹೋಲಿಕೆ  

ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ಸ್ಥಾಪನೆಯಾಗುವದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸಂಗತಿ ಸ್ಥಾಪಿತವಾಗಬೇಕು.


ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಮನಸ್ಸಿಗೆ ತೆಗೆದುಕೊಳ್ಳಬೇಡ.


ಇಬ್ಬರ ಸಾಕ್ಷಿ ನಿಜವಾಗುತ್ತದೆಂಬದಾಗಿ ನಿಮ್ಮ ಧರ್ಮಶಾಸ್ತ್ರದಲ್ಲೇ ಬರೆದದೆ.


ಮೋಶೆಯ ವಿಧಿಗಳನ್ನು ಅಸಡ್ಡೆ ಮಾಡಿದವನಿಗೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳ ಮಾತಿನ ಮೇಲೆ ಕನಿಕರವಿಲ್ಲದೆ ಮರಣದಂಡನೆ ಆಗುತ್ತದಷ್ಟೆ.


ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು; ಮರಣಶಿಕ್ಷೆಯನ್ನು ವಿಧಿಸುವದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಒಬ್ಬನ ಸಾಕ್ಷಿ ಮಾತ್ರ ಇದ್ದರೆ ಮರಣಶಿಕ್ಷೆಯನ್ನು ವಿಧಿಸಕೂಡದು.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕೂತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬದಾಗಿ ಜನರ ಎದುರಿನಲ್ಲಿ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣೀತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರುವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು