Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:23 - ಕನ್ನಡ ಸತ್ಯವೇದವು J.V. (BSI)

23 ಆದದರಿಂದ ಪರಲೋಕರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಪರಲೋಕರಾಜ್ಯವು ತನ್ನ ಸೇವಕರು ತನಗೆ ಕೊಡಬೇಕಿದ್ದ ಸಾಲದ ಹಣವನ್ನು ವಸೂಲಿ ಮಾಡಲು ತೀರ್ಮಾನಿಸಿದ ಒಬ್ಬ ರಾಜನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಆದ್ದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕ ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಕಶ್ಯಾಕ್ ಸರ್ಗಾಚೊ ರಾಜ್ ಮಟ್ಲ್ಯಾರ್, ಅಶೆ ಎಗ್ದಾ ಎಕ್ ರಾಜಾ ಹೊತ್ತೊ, ತೆನಿ ಅಪ್ನಾಚ್ಯಾ ಆಳಾಂಚೊ ಲೆಕ್ಕ್ ಇಚಾರುಚೆ ಮನುನ್ ನಿರ್‍ದಾರ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:23
17 ತಿಳಿವುಗಳ ಹೋಲಿಕೆ  

ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.


ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.


ಮತ್ತು ಪರಲೋಕರಾಜ್ಯವು ಒಂದು ಬಲೆಗೆ ಹೋಲಿಕೆಯಾಗಿದೆ. ಅದನ್ನು ಸಮುದ್ರದಲ್ಲಿ ಹಾಕಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿದರು.


ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ದೇಶಾಂತರಕ್ಕೆ ಹೋಗುವ ಒಬ್ಬ ಮನುಷ್ಯನು ತನ್ನ ಆಳುಗಳನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವದು.


ಆಗ ಆತನು ಅವರಿಗೆ - ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು ಮನೇಯಜಮಾನನಿಗೆ ಹೋಲಿಕೆಯಾಗಿದ್ದಾನೆ. ಅವನು ತನ್ನ ಬೊಕ್ಕಸದೊಳಗಿಂದ ಹೊಸ ವಸ್ತುಗಳನ್ನೂ ಹಳೇ ವಸ್ತುಗಳನ್ನೂ ಹೊರಗೆ ತರುತ್ತಿರುವನು ಎಂದು ಹೇಳಿದನು.


ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತಕ್ಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.


ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕರಾಜ್ಯವು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.


ಆಗ ಪರಲೋಕರಾಜ್ಯವು ಆರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಎದುರುಗೊಳ್ಳುವದಕ್ಕೆ ಹೊರಟಂಥ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.


ಆದದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಯುಳ್ಳ ಮನುಷ್ಯನನ್ನು ಹೋಲುವನು.


ಅವನು ಲೆಕ್ಕಾ ತೆಗೆದುಕೊಳ್ಳುವದಕ್ಕೆ ಪ್ರಾರಂಭಮಾಡಿದಾಗ ಕೋಟ್ಯಾಂತರ ಸಾಲಾ ಮಾಡಿದವನೊಬ್ಬನನ್ನು ಅವನ ಬಳಿಗೆ ಹಿಡತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು