Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:25 - ಕನ್ನಡ ಸತ್ಯವೇದವು J.V. (BSI)

25 ಆ ಸಾಲಾ ತೀರಿಸುವದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನ ಒಡೆಯನು ಅವನನ್ನೂ ಅವನ ಹೆಂಡತಿಮಕ್ಕಳನ್ನೂ ಅವನ ಬದುಕೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಸೇವಕನು ತನ್ನ ಯಜಮಾನನಾದ ರಾಜನಿಗೆ ಹಣವನ್ನು ಕೊಡಲು ಸಮರ್ಥನಾಗಿರಲಿಲ್ಲ. ಆದ್ದರಿಂದ ಆ ಸೇವಕನನ್ನು ಮತ್ತು ಅವನಲ್ಲಿದ್ದ ಪ್ರತಿಯೊಂದನ್ನೂ ಅವನ ಹೆಂಡತಿ ಮತ್ತು ಮಕ್ಕಳ ಸಮೇತವಾಗಿ ಮಾರಿ, ಬಂದ ಹಣವನ್ನೆಲ್ಲಾ ಕೊಡಬೇಕಾದ ಸಾಲಕ್ಕೆ ವಜಾ ಮಾಡಬೇಕೆಂದು ರಾಜನು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಕೊಡುವುದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅರಸನು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತ್ಯಾ ಅಳಾಕ್ಡೆ ತೆ, ಫೆಡುಕ್ ಹೊಯ್ ಸರ್ಕೆ ಪೈಸೆ ನತ್ತೆ. ತಸೆಮನುನ್ ರಾಜಾನ್ ತೆಚೆ ರಿನ್ ಭರುನ್ ಘೆವ್‍ಸಾಟ್ನಿ ತ್ಯಾ ಅಳಾಕ್, ಅನಿ ತೆಚ್ಯಾ ಬಾಯ್ಕೊ ಪೊರಾಕ್ನಿ ಗುಲಾಮ್ ಕರುನ್ ಇಕಾ ಮನುನ್ ಹುಕುಮ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:25
9 ತಿಳಿವುಗಳ ಹೋಲಿಕೆ  

ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿರಿ, ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಇಷ್ಟರಲ್ಲೇ ಅಪಹರಿಸಿದರು; ನಮ್ಮ ಯತ್ನವೇನೂ ಸಾಗುವದಿಲ್ಲ. ನಮ್ಮ ಹೊಲತೋಟಗಳು ಪರಾಧೀನವಾದವು ಎಂದು ಗುಣುಗುಟ್ಟಿದರು.


ಒಂದು ದಿವಸ ಪ್ರವಾದಿಮಂಡಲಿಯವರಲ್ಲೊಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ - ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು; ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನೆಂಬದು ನಿನಗೆ ಗೊತ್ತುಂಟಲ್ಲಾ; ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಂಡು ಹೋಗುವದಕ್ಕೆ ಬಂದಿದ್ದಾನೆ ಎಂದು ಮೊರೆಯಿಟ್ಟಳು.


ತೀರಿಸುವದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಬಿಟ್ಟುಬಿಟ್ಟನು. ಹಾಗಾದರೆ ಅವರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸಾನು ಎಂದು ಕೇಳಿದ್ದಕ್ಕೆ ಸೀಮೋನನು -


ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ದಾಸನಂತೆ ನಡಿಸಬಾರದು.


ನಾವು ನವ್ಮಿುಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು ಅನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.


ಯೆಹೋವನು ಹೀಗನ್ನುತ್ತಾನೆ - ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ ನೋಡಿರಿ, ನಿಮ್ಮ ದೋಷಗಳ ನಿವಿುತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ನಿಮ್ಮಲ್ಲಿ ಯಾವನಾದರೂ ಇಬ್ರಿಯನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರುಷ ದಾಸನಾಗಿದ್ದು ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.


ಸೂರ್ಯೋದಯವಾದನಂತರ ಒಬ್ಬನು ಕಳ್ಳನನ್ನು ಹೊಡೆದು ಕೊಂದರೆ ಅದು ನರಹತ್ಯವೇ ಸರಿ.) ಅವನು ಪೂರ್ತಿಯಾಗಿ ಸಲ್ಲಿಸಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ದಾಸನಾಗಿ ಮಾರಲ್ಪಡಬೇಕು.


ಅವನು ಲೆಕ್ಕಾ ತೆಗೆದುಕೊಳ್ಳುವದಕ್ಕೆ ಪ್ರಾರಂಭಮಾಡಿದಾಗ ಕೋಟ್ಯಾಂತರ ಸಾಲಾ ಮಾಡಿದವನೊಬ್ಬನನ್ನು ಅವನ ಬಳಿಗೆ ಹಿಡತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು