Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:35 - ಕನ್ನಡ ಸತ್ಯವೇದವು J.V. (BSI)

35 ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸಹೋದರನಿಗೆ ಮನಃಪೂರ್ವಕವಾಗಿ ಕ್ಷವಿುಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಪರಲೋಕದ ನನ್ನ ತಂದೆಯು ನಿಮಗೆ ಮಾಡುವಂತೆಯೇ ಈ ರಾಜನು ಮಾಡಿದನು. ನೀವು ನಿಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ನಿಜವಾಗಿಯೂ ಕ್ಷಮಿಸಬೇಕು. ಇಲ್ಲದಿದ್ದರೆ ಪರಲೋಕದ ನನ್ನ ತಂದೆಯೂ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಅದರಂತೆಯೇ ನಿಮ್ಮಲ್ಲಿ ಪ್ರತಿಯೊಬ್ಬರು ಹೃದಯಪೂರ್ವಕವಾಗಿ ತನ್ನ ಸಹೋದರನನ್ನು ಕ್ಷಮಿಸದೆ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ಸಹ ನಿಮಗೆ ಹಾಗೆಯೇ ಮಾಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತನ್ನಾ ಜೆಜುನ್ ತಸೆಚ್ ತುಮಿಬಿ ತುಮ್ಚ್ಯಾ ಭಾವಾಕ್ ತುಮ್ಚ್ಯಾ ಮನಾತ್ನಾ ಮಾಪ್ ಕರಿನಸ್ಲ್ಯಾರ್, ಸರ್‍ಗಾ ವೈಲೊ ಮಾಜೊ ಬಾಬಾಬಿ ತುಮ್ಕಾ ಮಾಪ್ ಕರಿನಾ. ಮನುನ್ ಕಾನಿ ಮುಗಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:35
16 ತಿಳಿವುಗಳ ಹೋಲಿಕೆ  

ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥನೆಮಾಡುವಾಗೆಲ್ಲಾ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಅವನಿಗೆ ಕ್ಷವಿುಸಿರಿ; ಕ್ಷವಿುಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ನಿಮಗೆ ಕ್ಷವಿುಸಿಬಿಡುವನು ಅಂದನು.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷವಿುಸಿದಂತೆ ನಮ್ಮ ತಪ್ಪುಗಳನ್ನು ಕ್ಷವಿುಸು.


ನರನ ನಡತೆಯು ಸ್ವಂತ ದೃಷ್ಟಿಗೆ ನೆಟ್ಟಗೆ; ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.


ಬಡವನ ಮೊರೆಗೆ ಕಿವಿಮುಚ್ಚಿಕೊಳ್ಳುವವನು ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಆದರೆ ತೀಕ್ಷ್ಣವಾದ ಮತ್ಸರವೂ ಪಕ್ಷಭೇದವೂ ನಿಮ್ಮ ಹೃದಯದೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಧರ್ಮೋಪದೇಶವನ್ನೂ ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿನಪಡಿಸಿಕೊಂಡರು; ಆದಕಾರಣ ಸೇನಾಧೀಶ್ವರ ಯೆಹೋವನಿಂದ ಅತಿರೌದ್ರವು ಅವರ ಮೇಲೆ ಬಿತ್ತು.


ಇಸ್ರಾಯೇಲಿಗೆ ಇಷ್ಟು ದಂಡನೆ ಆದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ತಿರುಗಿಕೊಂಡಿದ್ದಾಳೆ ಎಂಬದು ಯೆಹೋವನಾದ ನನ್ನ ನುಡಿ.


ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಪೀಡಿಸುವವರ ಕೈಗೆ ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು