Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:4 - ಕನ್ನಡ ಸತ್ಯವೇದವು J.V. (BSI)

4 ಹೀಗಿರುವದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುತ್ತಾನೋ, ಅವನೇ ಪರಲೋಕರಾಜ್ಯದಲ್ಲಿ ಹೆಚ್ಚಿನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುವವನೇ ಪರಲೋಕರಾಜ್ಯದಲ್ಲಿ ಅತ್ಯುತ್ತಮ ಸ್ಥಾನ ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾರು ಈ ಚಿಕ್ಕಮಗುವಿನಂತೆ ತಮ್ಮನ್ನು ತಾವು ತಗ್ಗಿಸಿಕೊಳ್ಳುವರೋ ಅವರೇ ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜೊ ಕೊನ್ ಅಪ್ನಾಕುಚ್ ಎಕ್ ಬಾರಿಕ್ ಪೊರಾ ಸರ್ಕೆ ಖಾಲ್ತಿ ಕರ್‍ತಾ, ತೊ ಸರ್‍ಗಾಚ್ಯಾ ರಾಜಾತ್‍ ಲೈ ಮೊಟೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:4
13 ತಿಳಿವುಗಳ ಹೋಲಿಕೆ  

ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆ ತರುವನು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು;


ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು; ಯಾಕಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು ಎಂದು ಹೇಳಿದನು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಆ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು - ಪರಲೋಕರಾಜ್ಯದಲ್ಲಿ ಯಾವನು ಹೆಚ್ಚಿನವನು ಎಂದು ಕೇಳಲು


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಅವರಿಗೆ - ನೀವು ತಿರುಗಿಕೊಂಡು ಚಿಕ್ಕ ಮಕ್ಕಳಂತೆ ಆಗದೆ ಹೋದರೆ ನೀವು ಪರಲೋಕರಾಜ್ಯದಲ್ಲಿ ಸೇರುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು.


ಯಾಕಂದರೆ ಅವರು ದಾರಿಯಲ್ಲಿ ಒಬ್ಬರಕೂಡೊಬ್ಬರು - [ತಮ್ಮಲ್ಲಿ] ಯಾವನು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು