Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:5 - ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನ್ನ ಹೆಸರಿನಲ್ಲಿ ಇಂತಹ ಮಗುವೊಂದನ್ನು ಸ್ವೀಕರಿಸುವವನು ನನ್ನನ್ನೇ ಸ್ವೀಕರಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯಾವನಾದರೂ ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯಾರಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಂಡರೆ ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅನಿ ಅಸ್ಲ್ಯಾ ಎಕ್ ಬಾರಿಕ್ ಪೊರಾಕ್ ಮಾಜ್ಯಾ ನಾವಾನ್ ಜೆ ಕೊನ್ ಸ್ವಿಕಾರ್ ಕರ್‍ತಾ, ತೊ ಮಾಕಾಚ್ ಸ್ವಿಕಾರ್ ಕರ್‍ತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:5
12 ತಿಳಿವುಗಳ ಹೋಲಿಕೆ  

ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ನನ್ನ ಶರೀರದಲ್ಲಿ ನಿಮ್ಮ ಬೇಸರಿಕೆಗೆ ಆಸ್ಪದವಾದದ್ದನ್ನು ನೀವು ಹೀನೈಸಲಿಲ್ಲ, ಓಕರಿಸಲಿಲ್ಲ; ನನ್ನನ್ನು ದೇವದೂತನಂತೆ ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿರಿ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಾನು ಕಳುಹಿಸಿಕೊಟ್ಟವನನ್ನು ಅಂಗೀಕರಿಸುವವನು ನನ್ನನ್ನು ಅಂಗೀಕರಿಸುವವನಾಗಿದ್ದಾನೆ; ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ಅಂಗೀಕರಿಸುವವನಾಗಿದ್ದಾನೆ.


ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು ಎಂದು ಹೇಳಿದನು.


ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು; ಯಾಕಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು ಎಂದು ಹೇಳಿದನು.


ನೀವು ಕ್ರಿಸ್ತನವರೆಂದು ನಿಮಗೆ ಯಾವನಾದರೂ ಒಂದು ತಂಬಿಗೆ ನೀರನ್ನು ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆಗ ಆತನು - ನೀವು ಈ ಕೇವಲ ಅಲ್ಪವಾದವರಲ್ಲಿ ಒಬ್ಬನಿಗೆ ಏನೇನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಯಾಕಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವದು, ತಟ್ಟುವವನಿಗೆ ತೆರೆಯುವದು.


ಹೀಗಿರುವದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುತ್ತಾನೋ, ಅವನೇ ಪರಲೋಕರಾಜ್ಯದಲ್ಲಿ ಹೆಚ್ಚಿನವನು.


ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಣುಗಿಸಿಬಿಡುವದು ಅವನಿಗೆ ಹಿತವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು