Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:7 - ಕನ್ನಡ ಸತ್ಯವೇದವು J.V. (BSI)

7 ತೊಡಕುಗಳು ಬರುವದರಿಂದ ಲೋಕಕ್ಕೆ ಎಷ್ಟೋ ಕೇಡು! ತೊಡಕುಗಳು ಹೇಗಾದರೂ ಬರುವವು. ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ, ಅವನ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪಾಪಕ್ಕೆ ಪ್ರಚೋದಿಸುವ ಲೋಕಕ್ಕೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜನರನ್ನು ಪಾಪಕ್ಕೆ ನಡೆಸುವ ಸಂಗತಿಗಳ ನಿಮಿತ್ತ ನಾನು ಈ ಲೋಕದ ವಿಷಯದಲ್ಲಿ ದುಃಖಪಡುತ್ತೇನೆ. ಅವು ಯಾವಾಗಲೂ ಇರುತ್ತವೆ. ಆದರೆ ಅವುಗಳಿಗೆ ಕಾರಣವಾಗುವ ವ್ಯಕ್ತಿಗೆ ಬಹಳ ಕೇಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹ್ಯಾ ಜಗಾಚಿ ಗತ್ ಕಾಯ್ ಸಾಂಗು! ಲೊಕಾನಿ ಅಪ್ನಾಚೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಲ್ಯಾ ಹ್ಯಾ ಸಂಗ್ತಿಯಾ ಕನ್ನಾಬಿ ಹೊವ್ನ್‌ಗೆತುಚ್ ರ್‍ಹಾತ್ಯಾತ್. ಖರೆ ತ್ಯಾ ಸಂಗ್ತಿಯಾ ಹೊಯ್ ಸರ್ಕೆ ಕರುಕ್ ಕಾರನ್ ಹೊತಲ್ಯಾಂಚಿ ಗತ್ ಕಾಯ್ ಸಾಂಗು!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:7
30 ತಿಳಿವುಗಳ ಹೋಲಿಕೆ  

ಆತನು ತನ್ನ ಶಿಷ್ಯರಿಗೆ - ತೊಡಕುಗಳು ಬಾರದೆ ಇರಲಾರವು; ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?


ನಿಮ್ಮಲ್ಲಿ ಇಂಥಿಂಥವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯಗಳೂ ಇರುವದು ಅವಶ್ಯವೇ.


ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಅಂದನು.


ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.


ಆಗ ನಮ್ಮನ್ನು ಎದುರಿಸುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವದಕ್ಕೆ ಅವಕಾಶವಿಲ್ಲದೆ ನಾಚಿಕೊಳ್ಳುವರು.


ಮನೆಯಲ್ಲೇ ಕೆಲಸಮಾಡುವವರೂ ಸುಶೀಲೆಯರೂ ನಿಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ಬುದ್ಧಿ ಕಲಿಸುವ ಹಾಗೆ ಬೋಧಿಸು.


ದಾಸರಾಗಿ ಮತ್ತೊಬ್ಬರ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ಮಾನಕ್ಕೂ ಯೋಗ್ಯರೆಂದೆಣಿಸಲಿ; ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದೆ ಉಂಟಾದೀತು.


ಸಹೋದರರೇ, ಯೇಸುವನ್ನು ಹಿಡಿದುಕೊಂಡವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವದು ಅವಶ್ಯವಾಗಿತ್ತು.


ನಾನು ಇವರ ಸಂಗಡ ಇದ್ದಾಗ ನೀನು ನನಗೆ ಕೊಟ್ಟಿರುವ ನಿನ್ನ ಹೆಸರಿನಲ್ಲಿ ಇವರನ್ನು ಕಾಯುತ್ತಾ ಬಂದೆನು, ಇವರನ್ನು ಕಾಪಾಡಿದೆನು; ಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕೆ ಗುರಿಯಾದ ಆ ಮನುಷ್ಯನೇ ಹೊರತು ಇವರಲ್ಲಿ ಮತ್ತಾರೂ ನಾಶವಾಗಲಿಲ್ಲ.


ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವದು ಅಗತ್ಯ; ಆದರೂ ಇದು ಇನ್ನೂ ಅಂತ್ಯಕಾಲವಲ್ಲ.


ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವದಕ್ಕೆ ಆಸ್ಪದ ಕೊಟ್ಟದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವದು


ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಫೀಕರಿಸಿದ್ದರಿಂದ ಅವರ ಅಪರಾಧವು ಆತನ ದೃಷ್ಟಿಯಲ್ಲಿ ಅಧಿಕವಾಯಿತು.


ಇದರಿಂದ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಹುಟ್ಟಿತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ಇದ್ದರು.


ಆತನು ತಿರುಗಿಕೊಂಡು ಪೇತ್ರನಿಗೆ - ಸೈತಾನನೇ, ನನ್ನ ಮುಂದೆ ನಿಲ್ಲಬೇಡ, ನಡೆ, ನನಗೆ ನೀನು ವಿಘ್ನವಾಗಿದ್ದೀ; ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು