Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:13 - ಕನ್ನಡ ಸತ್ಯವೇದವು J.V. (BSI)

13 ಆಗ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ತಂದು ಆತನು ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಲು ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅನಂತರ ಕೆಲವರು ಚಿಕ್ಕಮಕ್ಕಳನ್ನು ಯೇಸುಸ್ವಾಮಿಯ ಬಳಿಗೆ ತಂದರು. ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಿಕೊಂಡರು. ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಜನರು ಯೇಸುವಿನ ಬಳಿಗೆ ಬಂದು ತಮ್ಮ ಚಿಕ್ಕ ಮಕ್ಕಳನ್ನು ತಂದು ಅವರಿಗಾಗಿ ಪ್ರಾರ್ಥಿಸಬೇಕೆಂದು ಆತನನ್ನು ಬೇಡಿಕೊಂಡರು. ಇದನ್ನು ಕಂಡ ಶಿಷ್ಯರು ಚಿಕ್ಕ ಮಕ್ಕಳನ್ನು ಆತನ ಬಳಿಗೆ ತರಕೂಡದೆಂದು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ತಮ್ಮ ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೆಲವು ಜನರು ಚಿಕ್ಕಮಕ್ಕಳನ್ನು ಯೇಸುವಿನ ಬಳಿಗೆ ತಂದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಉಲ್ಲ್ಯಾಸ್ಯಾ ಲೊಕಾನಿ ಪೊರಾಂಚ್ಯಾ ವರ್‍ತಿ ಹಾತ್ ಥವ್ನ್ ಮಾಗ್ನಿ ಕರುನ್ ಘೆವ್‍ಸಾಟ್ನಿ ಮನುನ್ ಜೆಜುಕ್ಡೆ ಯೆಲ್ಯಾನಿ. ಖರೆ ಶಿಸಾನಿ ಲೊಕಾಕ್ನಿ ಅಡ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:13
15 ತಿಳಿವುಗಳ ಹೋಲಿಕೆ  

ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವವರೆಲ್ಲರಿಗೆ ಮಾಡೋಣವಾಗಿದೆ ಎಂದು ಹೇಳಿದನು.


ಯಾಕಂದರೆ ಕ್ರಿಸ್ತನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ದೇವಜನಕ್ಕೆ ಸಂಬಂಧಪಟ್ಟವನಾದನು; ಮತ್ತು ಕ್ರಿಸ್ತನಂಬಿಕೆಯಿಲ್ಲದ ಹೆಂಡತಿಯು ನಮ್ಮ ಸಹೋದರನಾದ ತನ್ನ ಗಂಡನಲ್ಲಿ ದೇವಜನಕ್ಕೆ ಸಂಬಂಧಪಟ್ಟವಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ದೇವಜನರಲ್ಲಿ ಸೇರಿದವರೇ ಆಗಿದ್ದಾರೆ.


ಆ ಗುಂಪಿನವರು - ಸುಮ್ಮನಿರಿ ಎಂದು ಅವರನ್ನು ಗದರಿಸಲು ಅವರು - ಸ್ವಾಮೀ, ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಹೆಚ್ಚಾಗಿ ಕೂಗಿಕೊಂಡರು.


ಆಗ ಪೇತ್ರನು ಆತನ ಕೈಹಿಡಿದು - ಸ್ವಾಮೀ, ದೇವರು ನಿನ್ನನ್ನು ಕಾಯಲಿ; ನಿನಗೆ ಹೀಗೆ ಎಂದಿಗೂ ಆಗಬಾರದು ಎಂದು ಆತನನ್ನು ಗದರಿಸುವದಕ್ಕೆ ಪ್ರಾರಂಭಿಸಲು


ನಾನು ಅವರ ಹಿತವನ್ನೂ ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ಅನಂತರ ಆಕೆಯು ಮೂರು ವರುಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರಸಹಿತವಾಗಿ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು; ಮಗನು ಇನ್ನೂ ಚಿಕ್ಕವನಾಗಿದ್ದನು.


ಕೆಲವು ಕಾಲವಾದ ಮೇಲೆ ತಂದೆಯು ಬಹಳ ಬಲಹೀನನಾಗಿ ಬಿದ್ದಿದ್ದಾನೆಂಬ ವರ್ತಮಾನವು ಯೋಸೇಫನಿಗೆ ಬರಲು ಅವನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ಸಂಗಡ ಕರೆದುಕೊಂಡು ಅವನ ಬಳಿಗೆ ಬಂದನು.


ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ; ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ; ಮತ್ತು ಪರಲೋಕರಾಜ್ಯದ ನಿವಿುತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಅಂಗೀಕರಿಸಬಲ್ಲವನು ಅಂಗೀಕರಿಸಲಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು