Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:14 - ಕನ್ನಡ ಸತ್ಯವೇದವು J.V. (BSI)

14 ಆದರೆ ಯೇಸು - ಮಕ್ಕಳನ್ನು ಬಿಡಿರಿ; ನನ್ನ ಹತ್ತರ ಬರುವದಕ್ಕೆ ಅವುಗಳಿಗೆ ಅಡ್ಡಿಮಾಡಬೇಡಿರಿ; ಪರಲೋಕರಾಜ್ಯವು ಇಂಥವರದೇ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ, ಸ್ವರ್ಗಸಾಮ್ರಾಜ್ಯ ಇಂಥವರದೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಯೇಸು, “ಚಿಕ್ಕ ಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿ ಮಾಡಬೇಡಿ. ಏಕೆಂದರೆ ಪರಲೋಕರಾಜ್ಯ ಈ ಚಿಕ್ಕ ಮಕ್ಕಳಂಥವರದೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಜೆಜುನ್ ತೆಂಕಾ,“ಬಾರಿಕ್ ಪೊರಾಕ್ನಿ ಮಾಜೆಕ್ಡೆ ಯೆವ್ಕ್ ಸೊಡಾ, ತೆಂಕಾ ಅಡ್ವುನಕಾಶಿ, ಕಶ್ಯಾಕ್ ಮಟ್ಲ್ಯಾರ್ ಸರ್‍ಗಾಚೆ ರಾಜ್ ಬಾರಿಕ್ ಪೊರಾಂಚ್ಯಾ ಸರ್ಕೆ ಹೊತ್ತ್ಯಾಂಚೆಚ್.” ಮಟ್ಲ್ಯಾನ್ ಅನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:14
18 ತಿಳಿವುಗಳ ಹೋಲಿಕೆ  

ಅವರಿಗೆ - ನೀವು ತಿರುಗಿಕೊಂಡು ಚಿಕ್ಕ ಮಕ್ಕಳಂತೆ ಆಗದೆ ಹೋದರೆ ನೀವು ಪರಲೋಕರಾಜ್ಯದಲ್ಲಿ ಸೇರುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.


ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.


ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಆದರೆ ನನಗೆ - ನೀನು ಗರ್ಭವತಿಯಾಗಿ ಮಗನನ್ನು ಹೆರುವಿ; ಆದದರಿಂದ ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು ಅಂದಳು.


ಬಾಲಕನಾದ ಸಮುವೇಲನು ಏಫೋದೆಂಬ ನಾರುಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ಅನಂತರ ಆಕೆಯು ಮೂರು ವರುಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರಸಹಿತವಾಗಿ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು; ಮಗನು ಇನ್ನೂ ಚಿಕ್ಕವನಾಗಿದ್ದನು.


ಇಸಾಕನೆಂದು ಹೆಸರಿಟ್ಟು ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಸುನ್ನತಿ ಮಾಡಿದನು.


ಮಗನು ಮೊಲೆಬಿಡುವವರೆಗೂ ನಾನು ಬರುವದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುವೆನು ಎಂದು ಹೇಳಿದಳು.


ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕರಾಜ್ಯವು ಅವರದು.


ನೀತಿಯ ನಿವಿುತ್ತವಾಗಿ ಹಿಂಸೆಯನ್ನು ತಾಳಿಕೊಳ್ಳುವವರು ಧನ್ಯರು; ಪರಲೋಕರಾಜ್ಯವು ಅವರದು.


ಅವುಗಳ ಮೇಲೆ ಕೈಯಿಟ್ಟು, ಅಲ್ಲಿಂದ ಹೊರಟು ಹೋದನು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು