Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:19 - ಕನ್ನಡ ಸತ್ಯವೇದವು J.V. (BSI)

19 ಮತ್ತು ನಿನ್ನ ಹಾಗೆಯೇ ನಿನ್ನ ನೆರೆಯವನನ್ನು ಪ್ರೀತಿ ಮಾಡಬೇಕು ಎಂಬಿವುಗಳೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು ನಿನ್ನನ್ನು ನೀನು ಪ್ರೀತಿಸುವಂತೆ ಬೇರೆಯವರನ್ನೂ ಪ್ರೀತಿಸಬೇಕು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತುಜ್ಯಾ ಬಾಬಾಕ್ ಮಾನ್ ದಿ, ಅನಿ ತುಜೊ ತಿಯಾ ಪ್ರೆಮ್ ಕರ್ಲ್ಯಾ ಸರ್ಕೆ ತುಜ್ಯಾ ಅಜು-ಬಾಜುಚ್ಯಾ ಲೊಕಾಂಚೊ ಪ್ರೆಮ್ ಕರ್.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:19
15 ತಿಳಿವುಗಳ ಹೋಲಿಕೆ  

ನಿಮ್ಮ ಸ್ವಜನರಲ್ಲಿ ಯಾರಿಗಾದರೂ ಕೇಡಿಗೆ ಕೇಡನ್ನು ಮಾಡದೆ ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.


ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಒಂದು ಉಂಟು, ಅದು ಯಾವದಂದರೆ - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದೇ.


ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ, ಮತ್ತು ನಿನಗೆ ಮೇಲಾಗುವದು.


ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ.


ಆದರೂ ಶಾಸ್ತ್ರಕ್ಕೆ ಸರಿಯಾಗಿ ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬ ರಾಜಾಜ್ಞೆಯನ್ನು ನೀವು ನೆರವೇರಿಸುತ್ತಿದ್ದರೆ ನೀವು ಒಳ್ಳೇದನ್ನು ಮಾಡುವವರು.


ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಕವಾಗಿದೆ.


ಅದಕ್ಕೆ ಅವನು - ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಬುದ್ಧಿಯಿಂದಲೂ ಪ್ರೀತಿಸಬೇಕು. ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂದು ಬರೆದದೆ ಅಂದನು.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು ಧಿಕ್ಕರಿಸುವವನ ಕಣ್ಣನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.


ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕೆಂದು ಹೇಳಿಯದೆ ಎಂಬದಾಗಿ ಕೇಳಿದ್ದೀರಷ್ಟೆ.


ಆ ಯೌವನಸ್ಥನು ಆತನನ್ನು - ಇವೆಲ್ಲಕ್ಕೂ ಸರಿಯಾಗಿ ನಡಕೊಂಡಿದ್ದೇನೆ; ಇನ್ನೇನು ಕಡಿಮೆಯಾಗಿರಬಹುದು? ಎಂದು ಕೇಳಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು