Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:22 - ಕನ್ನಡ ಸತ್ಯವೇದವು J.V. (BSI)

22 ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದನ್ನು ಕೇಳಿದ್ದೇ ಆ ಯುವಕ ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟೇಹೋದ. ಏಕೆಂದರೆ ಅವನಿಗೆ ಅಪಾರ ಆಸ್ತಿಪಾಸ್ತಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇದನ್ನು ಕೇಳಿದಾಗ ಅವನು ಬಹಳ ದುಃಖದಿಂದ ಹೊರಟುಹೋದನು. ಏಕೆಂದರೆ ಅವನು ದೊಡ್ಡ ಐಶ್ವರ್ಯವಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಆ ಯುವಕನು ಯೇಸು ಹೇಳಿದ್ದನ್ನು ಕೇಳಿ, ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹೆ ಆಯ್ಕುನ್ ತ್ಯಾ ದಾಂಡ್ಗ್ಯಾ ಮಾನ್ಸಾಕ್ ಲೈ ಬೆಜಾರ್ ಹೊಲೊ ಕಶ್ಯಾಕ್ ಮಟ್ಲ್ಯಾರ್ ತೊ ಲೈ ಸಾವ್ಕಾರ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:22
17 ತಿಳಿವುಗಳ ಹೋಲಿಕೆ  

ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ.


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು.


ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ;


ಇವುಗಳನ್ನು ಬಿಟ್ಟು ದೇವರಿಗೆ ಉಪಕಾರಸ್ತುತಿ ಮಾಡುವದು ಉತ್ತಮ. ಜಾರರು ದುರಾಚಾರಿಗಳು ವಿಗ್ರಹಾರಾಧಕರಂತಿರುವ ಲೋಭಿಗಳು ಇವರಲ್ಲಿ ಒಬ್ಬರಿಗಾದರೂ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೇ ಇಲ್ಲವೆಂದು ನೀವು ಚೆನ್ನಾಗಿ ಬಲ್ಲಿರಲ್ಲವೇ.


ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದದರಿಂದ ಈ ಮಾತಿಗೆ ಮೋರೆ ಬಾಡಿದವನಾಗಿ ದುಃಖದಿಂದ ಹೊರಟುಹೋದನು.


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ವ್ಯಸನಗೊಂಡನು.


ಆ ಮಾತಿಗೆ ಅರಸನು ದುಃಖಪಟ್ಟರೂ ತಾನು ಇಟ್ಟುಕೊಂಡ ಆಣೆಗಳ ನಿವಿುತ್ತವಾಗಿಯೂ ತನ್ನ ಸಂಗಡ ಪಙ್ತಿಯಲ್ಲಿ ಕೂತಿದ್ದವರ ನಿವಿುತ್ತವಾಗಿಯೂ ಅದನ್ನು ತಂದುಕೊಡುವದಕ್ಕೆ ಅಪ್ಪಣೆಕೊಟ್ಟನು.


ಅದಕ್ಕೆ ಅರಸನು ಬಹು ದುಃಖಪಟ್ಟರೂ ತಾನು ಇಟ್ಟುಕೊಂಡ ಆಣೆಗಳ ನಿವಿುತ್ತವಾಗಿಯೂ ತನ್ನ ಪಂಙ್ತಿಯಲ್ಲಿ ಕೂತಿದ್ದವರ ನಿವಿುತ್ತವಾಗಿಯೂ ಅವಳನ್ನು ಅಸಡ್ಡೆ ಮಾಡುವದಕ್ಕೆ ಮನಸ್ಸಿಲ್ಲದೆ


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ವಿುಕ್ಕ ಆಸ್ತಿಯನ್ನು ತನ್ನ ಮಕ್ಕಳಿಗೆ ಬಿಡುತ್ತಾರೆ.


ಯೇಸು ಅವನಿಗೆ - ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನು ಮಾರಿ ಬಡವರಿಗೆ ಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಆಗ ಯೇಸು ತನ್ನ ಶಿಷ್ಯರನ್ನು ನೋಡಿ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಐಶ್ವರ್ಯವಂತನು ಪರಲೋಕರಾಜ್ಯದಲ್ಲಿ ಸೇರುವದು ಕಷ್ಟ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ, ಆದರೆ ಲೋಕವು ಸಂತೋಷಿಸುವದು; ನಿಮಗೆ ದುಃಖವಾಗುವದು, ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು