Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:28 - ಕನ್ನಡ ಸತ್ಯವೇದವು J.V. (BSI)

28 ಯೇಸು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವಾಗ ನನ್ನನ್ನು ಹಿಂಬಾಲಿಸಿರುವ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜೆಜುನ್ ತೆಂಕಾ,“ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಮಾನ್ಸಾಚೊ ಲೆಕ್ ಮಹಿಮೆನ್ ಅಪ್ನಾಚ್ಯಾ ಸಿವಾಸನಾ ವರ್‍ತಿ ಬಸಲ್ಲ್ಯಾ ತನ್ನಾ ಸಗ್ಳೆ ನ್ಹವೆ ಕರ್‍ತಾ. ತನ್ನಾ ತುಮಿ ಬಾರಾ ಜಾನಾ ಮಾಜ್ಯಾ ವಾಂಗ್ಡಾ ಹೊತ್ತೆ ಇಸ್ರಾಯೆಲಾಚ್ಯಾ ಬಾರಾ ಘರಾನ್ಯಾಂಚ್ಯಾ ವರ್‍ತಿ ರಾಜ್ ಚಾಲ್ವುಕ್ ಬಾರಾ ಸಿವಾಸನಾಂಚ್ಯಾ ವರ್‍ತಿ ಬಸ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:28
35 ತಿಳಿವುಗಳ ಹೋಲಿಕೆ  

ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಎಲ್ಲಾ ದೇವದೂತರೊಂದಿಗೆ ಕೂಡಿಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕೂತುಕೊಳ್ಳುವನು;


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.


ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ನಾನು ಕೇಳಿದೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಒತ್ತಿಸಿಕೊಂಡರು. ಅವರ ಸಂಖ್ಯೆ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ.


ಆದರೆ ನಾವು ದೇವರ ವಾಗ್ದಾನವನ್ನು ನಂಬಿ ನೂತನಾಕಾಶಮಂಡಲವನ್ನೂ ನೂತನಭೂಮಂಡಲವನ್ನೂ ಎದುರು ನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.


ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ನಾನು ಸೃಷ್ಟಿಸುವ ನೂತನಾಕಾಶಮಂಡಲವೂ ನೂತನಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ಇಗೋ, ನೂತನಾಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆಬಾರದು.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಇಗೋ, ಎಲ್ಲವನ್ನು ಹೊಸದುಮಾಡುತ್ತೇನೆ ಅಂದನು. ಮತ್ತು ಒಬ್ಬನು ನನಗೆ - ಇದನ್ನು ಬರೆ; ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ ಎಂದು ಹೇಳಿದನು.


ಇದಲ್ಲದೆ ಸಿಂಹಾಸನದ ಸುತ್ತಲು ಇಪ್ಪತ್ತುನಾಲ್ಕು ಸಿಂಹಾಸನಗಳಿದ್ದವು; ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತುನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು; ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಆ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಹೇಳಿಸಿದ್ದಾನೆ.


ಆತನು ಆಕೆಯನ್ನು - ನಿನಗೇನು ಬೇಕಮ್ಮಾ ಎಂದು ಕೇಳಲು ಆಕೆ - ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕೂತುಕೊಳ್ಳುವದಕ್ಕೆ ಅಪ್ಪಣೆಯಾಗಬೇಕು ಅಂದಳು.


ಆ ನದಿಯ ಉಭಯ ಪಾರ್ಶ್ವಗಳಲ್ಲಿ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಪ್ರಯೋಜನವಾಗಿವೆ.


ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ ಇಸ್ರಾಯೇಲ್ಯರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.


ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು


(ನೀವಾದರೋ ಇಸ್ರಾಯೇಲ್ ಕುಲಗಳಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಿರಿ.)


ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.


ಇಸ್ರಾಯೇಲ್ಯರ ಕುಲಗಳ ಸಂಖ್ಯಾಪ್ರಕಾರ ಹನ್ನೆರಡು ರತ್ನಗಳಿರಬೇಕು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.


ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಆ ಬೆಟ್ಟದ ಬುಡದಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿ ಇಸ್ರಾಯೇಲ್ಯರ ಯೌವನಸ್ಥರಿಗೆ -


ತರುವಾಯ ಅವರು ಏಲೀವಿುಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದದರಿಂದ ಆ ನೀರಿನ ಬಳಿಯಲ್ಲಿ ಇಳುಕೊಂಡರು.


ಪರಲೋಕದಲ್ಲಿ ಒಂದು ಮಹಾಲಕ್ಷಣವು ಕಾಣಿಸಿತು. ಅದೇನಂದರೆ, ಸೂರ್ಯನನ್ನು ಧರಿಸಿಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು;


ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ಆಗ ಪೇತ್ರನು ಆತನನ್ನು - ಇಗೋ, ನಾವು ಎಲ್ಲಾ ಬಿಟ್ಟುಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ನಮಗೆ ಏನು ದೊರಕುವದು ಎಂದು ಕೇಳಲು


ನಿನಗೆ ಮಹಾಪದವಿ ಬಂದಾಗ ನಮ್ಮಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಮಾಡಬೇಕು ಅಂದರು.


ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕೂತಿರುವ ಇಪ್ಪತ್ತುನಾಲ್ಕು ಮಂದಿ ಹಿರಿಯರು ಆತನಿಗೆ ಆಡ್ಡಬಿದ್ದು -


ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗುವದಿಲ್ಲ; ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು; ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಆರು ಮೆಟ್ಲುಗಳ ಎರಡು ಕಡೆಗಳಲ್ಲಿಯೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ. ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು