Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:29 - ಕನ್ನಡ ಸತ್ಯವೇದವು J.V. (BSI)

29 ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳುಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನನ್ನನ್ನು ಹಿಂಬಾಲಿಸಲು ತಮ್ಮ ಮನೆಗಳನ್ನು, ಸಹೋದರ ಸಹೋದರಿಯರನ್ನು, ತಂದೆತಾಯಿಗಳನ್ನು, ಮಕ್ಕಳನ್ನು ಇಲ್ಲವೆ ಆಸ್ತಿಯನ್ನು ತ್ಯಜಿಸಿದ ಪ್ರತಿಯೊಬ್ಬರು ತಾವು ಬಿಟ್ಟವುಗಳಿಗಿಂತ ಹೆಚ್ಚಾಗಿ ಪಡೆಯುತ್ತಾರೆ. ಅಲ್ಲದೆ ನಿತ್ಯಜೀವವನ್ನೂ ಹೊಂದಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ತನ್ನ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ, ನನ್ನ ಹೆಸರಿನ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಪಡೆದುಕೊಳ್ಳುವನು ಮತ್ತು ನಿತ್ಯಜೀವಕ್ಕೆ ಬಾಧ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಅನಿ ಮಾಜೆಸಾಟಿ ಜೆ ಕೊನ್ ಘರಾಕ್ನಿ, ಭಾವಾಕ್ನಿ, ಭೆನಿಯಾಕ್ನಿ, ಬಾಬಾಕ್, ಬಾಯ್ಕ್, ಪೊರಾಕ್ನಿ, ಶೆತಾಕ್ನಿ ಸೊಡ್ತಾ, ತೆಂಕಾ ಸೆಂಬರ್ ವಾಟ್ಯಾನಿ ಘೆತಾ, ಅನಿ ಕನ್ನಾಚ್ ಮರಾನ್ ನಸಲ್ಲೆ ಜಿವನ್‍ಬಿ ತೆಕಾ ದಿವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:29
25 ತಿಳಿವುಗಳ ಹೋಲಿಕೆ  

ಇಷ್ಟೇ ಅಲ್ಲದೇ, ನನ್ನ ಕರ್ತನಾದ ಕ್ರಿಸ್ತ ಯೇಸುವನ್ನರಿಯುವದೇ ಅತಿಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿವಿುತ್ತ ನಾನು ಎಲ್ಲವನ್ನೂ ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.


ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ತಾಯಿ ಹೆಂಡತಿ ಮಕ್ಕಳು ಅಣ್ಣತಮ್ಮಂದಿರು ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು.


ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನೀವು ಕ್ರಿಸ್ತನ ಹೆಸರಿನ ನಿವಿುತ್ತ ನಿಂದೆಗೆ ಗುರಿಯಾದರೆ ಧನ್ಯರೇ; ತೇಜೋಮಯವಾದ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ನೀವು ಲೋಕದ ಕಡೆಯವರಾಗಿರುತ್ತಿದ್ದರೆ ಲೋಕವು ನಿಮ್ಮ ಮೇಲೆ ತನ್ನವರೆಂದು ಮಮತೆ ಇಡುತ್ತಿತ್ತು; ಆದರೆ ನೀವು ಲೋಕದ ಕಡೆಯವರಲ್ಲದೆ ಇರುವದರಿಂದಲೂ ನಾನು ನಿಮ್ಮನ್ನು ಲೋಕದೊಳಗಿಂದ ಆರಿಸಿ ತೆಗೆದುಕೊಂಡಿರುವದರಿಂದಲೂ ಲೋಕವು ನಿಮ್ಮ ಮೇಲೆ ದ್ವೇಷ ಮಾಡುತ್ತದೆ.


ಮನುಷ್ಯಕುಮಾರನ ನಿವಿುತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ನನ್ನ ನಿವಿುತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ಆದರೆ ಬರೆದಿರುವ ಪ್ರಕಾರ - ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.


ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ಆಗ ಒಬ್ಬನು ಬಂದು ಆತನನ್ನು - ಬೋಧಕನೇ, ನಾನು ನಿತ್ಯಜೀವವನ್ನು ಪಡೆಯಬೇಕಾದರೆ ಏನು ಒಳ್ಳೇ ಕಾರ್ಯವನ್ನು ಮಾಡಬೇಕು ಎಂದು ಕೇಳಲಾಗಿ


ಒಬ್ಬನು ವಾಕ್ಯವನ್ನು ಕೇಳಿ ತಿಳುಕೊಂಡು ಫಲವಂತನಾಗಿ ನೂರರಷ್ಟಾಗಲಿ ಅರುವತ್ತರಷ್ಟಾಗಲಿ ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ; ಇವನೇ ಒಳ್ಳೆಯ ನೆಲವಾಗಿರುವವನು ಎಂದು ಹೇಳಿದನು.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ಇನ್ನು ಕೆಲವು ಒಳ್ಳೆಯ ನೆಲದಲ್ಲಿ ಬಿದ್ದು ಒಂದು ನೂರರಷ್ಟು, ಒಂದು ಅರುವತ್ತರಷ್ಟು, ಒಂದು ಮೂವತ್ತರಷ್ಟು ಫಲವನ್ನು ಕೊಟ್ಟವು.


ಯಾಕಂದರೆ ಅವರು ಕ್ರಿಸ್ತನ ಹೆಸರನ್ನು ಪ್ರಸಿದ್ಧಿಪಡಿಸುವದಕ್ಕೋಸ್ಕರ ಹೊರಟುಹೋಗಿದ್ದಾರೆ ಮತ್ತು ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.


ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಎಲ್ಲವನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.


ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ; ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ; ಹೀಗೆ ಬಿತ್ತುವವನಿಗೂ ಕೊಯ್ಯುವವನಿಗೂ ಕೂಡ ಸಂತೋಷವಾಗುವದು.


ಗಳಿಸುವ ಸಮಯ, ಕಳೆಯುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ, ಹರಿಯುವ ಸಮಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು