Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:3 - ಕನ್ನಡ ಸತ್ಯವೇದವು J.V. (BSI)

3 ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ - ಒಬ್ಬನು ಯಾವದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವದು ಧರ್ಮವೋ ಹೇಗೆ ಎಂದು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಯಾವುದಾದರೂ ಕಾರಣದಿಂದ ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ತಪ್ಪಿನಲ್ಲಿ ಸಿಕ್ಕಿಸುವುದಕ್ಕಾಗಿ, “ತನ್ನದೇ ಆದ ಯಾವ ಕಾರಣಕ್ಕಾಗಲಿ ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಫರಿಸಾಯರಲ್ಲಿ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಅವರ ಬಳಿಗೆ ಬಂದು, “ಒಬ್ಬ ಪುರುಷನು ಯಾವ ಕಾರಣದಿಂದಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಉಲ್ಲೆಸೆ ಫಾರಿಜೆವ್ ತೆಚೆಕ್ಡೆ ಯೆಲೆ. ಅನಿ ತೆಕಾ ಚುಕೆತ್ ಪಾಡ್ವುಸಾಟ್ನಿ ಮನುನ್, “ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್, ಕಸ್ಲ್ಯಾಬಿ ಕಾರನಾಕ್ ಲಾಗುನ್ ಎಕ್ ಘೊಮನ್ಸಾನ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ ಪತ್ತರ್ ದಿವ್ಕ್ ಹೊತಾ ಕಾಯ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:3
12 ತಿಳಿವುಗಳ ಹೋಲಿಕೆ  

ಆಗ ಫರಿಸಾಯರು ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ - ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವದು ಧರ್ಮವೋ ಹೇಗೆ ಎಂದು ಕೇಳಿದರು.


ಅವರು ಅರಣ್ಯದಲ್ಲಿ ನನ್ನನ್ನು ಪರೀಕ್ಷಿಸಿ ಶೋಧಿಸಿ ನಾಲ್ವತ್ತು ವರುಷ ನಾನು ನಡಿಸುತ್ತಿದ್ದ ಕೃತ್ಯಗಳನ್ನು ನೋಡಿದರು.


ಆತನ ಮೇಲೆ ತಪ್ಪುಹೊರಿಸುವದಕ್ಕೆ ಏನಾದರೂ ಒಂದು ನಿವಿುತ್ತ ಬೇಕಾಗಿದ್ದದರಿಂದ ಈತನು ಏನನ್ನುತ್ತಾನೋ ನೋಡೋಣ ಎಂದು ಹಾಗೆ ಕೇಳಿದರು. ಆದರೆ ಯೇಸು ಬೊಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.


ಕೊಡಬೇಕೋ ಬೇಡವೋ ಎಂದು ಆತನನ್ನು ಕೇಳಿದರು. ಆತನು ಅವರ ಕಪಟವನ್ನು ತಿಳಿದು - ನನ್ನನ್ನು ಯಾಕೆ ಪರೀಕ್ಷೆ ಮಾಡುತ್ತೀರಿ? ನನಗೆ ಒಂದು ಹಣವನ್ನು ತಂದು ತೋರಿಸಿರಿ ಅನ್ನಲು ಅವರು ತಂದರು.


ಆಮೇಲೆ ಅವರು ಆತನನ್ನು ಮಾತಿನಲ್ಲಿ ಹಿಡಿಯುವದಕ್ಕೆ ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.


ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆಮಾಡಬೇಕೆಂದು -


ತರುವಾಯ ಫರಿಸಾಯರೂ ಸದ್ದುಕಾಯರೂ ಬಂದು ಆತನನ್ನು ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕೆಂದು ಕೇಳಿದರು. ಆತನು ಅವರಿಗೆ -


ಮದುವೆಮಾಡಿಕೊಂಡಿರುವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆಯು ಏನಂದರೆ - ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು