Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:4 - ಕನ್ನಡ ಸತ್ಯವೇದವು J.V. (BSI)

4 ಆತನು - ಮನುಷ್ಯರನ್ನು ನಿರ್ಮಾಣ ಮಾಡಿದವನು ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೃಷ್ಟಿಕರ್ತ ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ಉಂಟುಮಾಡಿದರು ಎಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೇಸು, “ನೀವು ನಿಜವಾಗಿಯೂ ಇದನ್ನು ಪವಿತ್ರಗ್ರಂಥದಲ್ಲಿ ಓದಿದ್ದೀರಿ. ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಸೃಷ್ಟಿಸಿದನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೇಸು ಉತ್ತರವಾಗಿ ಅವರಿಗೆ, “ಆದಿಯಿಂದಲೇ ಸೃಷ್ಟಿಕರ್ತ, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಜೆಜುನ್ ತೆಂಕಾ, ತುಮಿ ಪವಿತ್ರ್ ಪುಸ್ತಕಾತ್. ರಚ್ತಲ್ಯಾನ್ ಅದ್ದಿ ರಚ್ತಾನಾ ಬಾಯ್ಕೊಮನುಸ್, ಅನಿ ಘೊಮನುಸ್ ಮನುನ್ ರಚ್ಲ್ಯಾನ್, ಮನುನ್ ವಾಚ್ವುಕ್‍ನ್ಯಾಶಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:4
15 ತಿಳಿವುಗಳ ಹೋಲಿಕೆ  

ಅವನು ಆಕೆಯನ್ನು ನೋಡಿ- ಈಗ ಸರಿ; ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬೂ ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ; ಈಕೆಯು ನರನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು ಅಂದನು.


ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು; ದೇವಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು; ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿದನು.


ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು. ಇದಲ್ಲದೆ ಅದೇ ದಿವಸದಲ್ಲಿ ಅವರನ್ನು ಆಶೀರ್ವದಿಸಿ ಅವರಿಗೆ ಮನುಷ್ಯ ಎಂದು ಹೆಸರಿಟ್ಟನು.


ಪರಮಾತ್ಮಾಂಶನಾದ ಯಾವನೂ ಹೀಗೆ ಮಾಡಲಿಲ್ಲ; ಆ ಪ್ರಸಿದ್ಧನೊಬ್ಬನು ಏಕೆ ಇಂಥ ಕೃತ್ಯಮಾಡಿದನು? ದೇವರ ವರವಾದ ಸಂತಾನವನ್ನು ಹಾರೈಸಿಯೇ. ಹೀಗಿರಲು ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ಯಾವನೂ ತನ್ನ ಯೌವನದ ಪತ್ನಿಗೆ ದ್ರೋಹಮಾಡದಿರಲಿ.


ಆತನು ಅವನಿಗೆ - ಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ? ಎಂದು ಹೇಳಿದನು.


ಮತ್ತು ಯೆಹೋವದೇವರು - ಮನುಷ್ಯನು ಒಂಟಿಗನಾಗಿರುವದು ಒಳ್ಳೇದಲ್ಲ; ಅವನಿಗೆ ಸರಿಬೀಳುವ ಸಹಕಾರಿಯನ್ನು ಉಂಟುಮಾಡುವೆನು ಅಂದನು.


ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ -


ಆತನು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬದನ್ನು ನೀವು ಓದಲಿಲ್ಲವೋ?


ಆದರೆ ಸತ್ತವರು ಬದುಕಿ ಏಳುತ್ತಾರೆಂಬ ವಿಷಯದಲ್ಲಿ ಹೇಳಬೇಕಾದರೆ - ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ದೇವರು ಮೋಶೆಗೆ ನುಡಿದದ್ದನ್ನು ನೀವು ಮೋಶೆಯ ಗ್ರಂಥದಲ್ಲಿ ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಓದಲಿಲ್ಲವೇ?


ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಶಾಸ್ತ್ರವಚನವನ್ನು ನೀವು ಓದಿಲ್ಲವೇ ಅಂದನು.


ಆತನು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಕೊರತೆಯುಳ್ಳವರಾಗಿ ಹಸಿದಾಗ ಏನು ಮಾಡಿದನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ?


ಯೇಸು ಅವರಿಗೆ - ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?


ಯೇಸು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬದನ್ನು ನೀವು ಓದಲಿಲ್ಲವೋ?


ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆ ಕೊಟ್ಟಂತೆಯೇ


ಯೆಹೋಯಾದನು ಅವನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಕೊಟ್ಟನು; ಅವನು ಗಂಡು ಹೆಣ್ಣು ಮಕ್ಕಳನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು