Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:9 - ಕನ್ನಡ ಸತ್ಯವೇದವು J.V. (BSI)

9 ಮತ್ತು ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗುತ್ತಾನೆಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ನಿಮಗೆ ಹೇಳುವುದನ್ನು ಕೇಳಿ; ತನ್ನ ಹೆಂಡತಿಯನ್ನು ಅವಳ ದುರ್ನಡತೆಯ ಕಾರಣದಿಂದಲ್ಲದೆ ಬಿಟ್ಟುಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ನಿಮಗೆ ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ. ಮೊದಲಿನ ಹೆಂಡತಿಯು ಬೇರೊಬ್ಬನೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವನು ಆಕೆಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆ ಆಗಬಹುದು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ, ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು, ಮತ್ತೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರ ಮಾಡುವವನಾಗಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 “ಮಿಯಾ ತುಮ್ಕಾ ಸಾಂಗ್ತಾ, ಎಕ್ ಮಾನುಸ್ ಅಪ್ನಾಚಿ ಬಾಯ್ಕೊ ದುಸ್ರ್ಯಾಚ್ಯಾ ವಾಂಗ್ಡಾ ಬುರ್ಸೊ ಸಮಂದ್ ಅಸಲ್ಲ್ಯಾ ಕಾರನಾಕ್ ಸೊಡುನ್, ದುಸ್ರ್ಯಾ ಕಸ್ಲ್ಯಾಬಿ ಕಾರನಾಸಾಟಿ ತೊ ಅಪ್ನಾಚ್ಯಾ ಬಾಯ್ಕೊಕ್ ಸೊಡ್ತಾ ಅನಿ ದುಸ್ರ್ಯಾ ಬಾಯ್ಕೊಮನ್ಸಿಕ್ಡೆ ಲಗಿನ್ ಹೊತಾ. ತರ್ ತೊ ವೆಭಿಚಾರ್ ಕರ್‍ತಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:9
18 ತಿಳಿವುಗಳ ಹೋಲಿಕೆ  

ಆದರೆ ನಾನು ನಿಮಗೆ ಹೇಳುವದೇನಂದರೆ - ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡಿದವನಾಗಿದ್ದಾನೆ.


ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ; ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.


ಮುತ್ತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳುವದಕ್ಕೆ ಸ್ವತಂತ್ರಳಾಗಿದ್ದಾಳೆ.


ನಿಮ್ಮಲ್ಲಿ ಜಾರತ್ವವುಂಟೆಂದು ಜನರು ಸಾಧಾರಣವಾಗಿ ಹೇಳುತ್ತಾರೆ. ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.


ಭ್ರಷ್ಟಳಾದ ಇಸ್ರಾಯೇಲು ಹಾದರಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ ಅಂಜದೆ ತಾನೂ ಹೋಗಿ ಸೂಳೆತನವನ್ನು ನಡಿಸಿದಳು.


ಆದರೆ ರಾತ್ರಿಯಲ್ಲಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು - ನೀನು ಆ ಸ್ತ್ರೀಯನ್ನು ಸೇರಿಸಿಕೊಂಡದರಿಂದ ಸಾಯತಕ್ಕವನಾಗಿದ್ದಿ; ಆಕೆ ಮುತ್ತೈದೆ ಅಂದನು.


ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ ಅಲ್ಲಿಯೂ ಬಹಳ ಸೂಳೆತನ ಮಾಡಿದಿ, ಆದರೂ ನಿನಗೆ ತೃಪ್ತಿಯಾಗಲಿಲ್ಲ.


ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ಸೂಳೆತನಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ವಿುತಿಮೀರಿ ಹಾದರಮಾಡಿದಿ, ಒಬ್ಬೊಬ್ಬನಿಗೂ ಒಳಗಾದಿ.


ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?


ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಅದು ಹೆಂಡತಿಗುಂಟು.


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.


ಮತ್ತು ಅವನು ಯೆಹೂದದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ ಯೆರೂಸಲೇವಿುನವರನ್ನು ದೇವದ್ರೋಹಮಾಡುವಂತೆ ಪ್ರೇರಿಸಿ ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.


ಆತನು - ಮೋಶೆಯು ನಿಮ್ಮ ಮೊಂಡತನವನ್ನು ನೋಡಿ ನಿಮ್ಮ ಹೆಂಡರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು; ಆದರೆ ಆದಿಯಿಂದಲೇ ಹಾಗೆ ಇರಲಿಲ್ಲ.


ಅದಕ್ಕೆ ಶಿಷ್ಯರು - ಹೆಂಡತಿಯ ವಿಷಯವಾಗಿ ಗಂಡನ ಧರ್ಮ ಹೀಗಿದ್ದರೆ ಮದುವೆಯಾಗುವದು ಒಳ್ಳೇದಲ್ಲ ಅಂದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು