Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:1 - ಕನ್ನಡ ಸತ್ಯವೇದವು J.V. (BSI)

1 ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹೆರೋದನು ರಾಜನಾಗಿದ್ದ ಕಾಲದಲ್ಲಿ ಯೇಸು ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟಿದನು. ಯೇಸು ಹುಟ್ಟಿದ ಮೇಲೆ, ಪೂರ್ವದೇಶದ ಕೆಲವು ಜ್ಞಾನಿಗಳು ಜೆರುಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಜುದೆಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಬೆತ್ಲೆಹೆಮ್ ಮನ್ತಲ್ಯಾ ಗಾಂವಾತ್ ಜಲಮ್ಲೊ. ತನ್ನಾ ಥೈ ಹೆರೊದ್ ಮನ್ತಲೊ ರಾಜಾ ರಾಜ್ವಡ್ಕಿ ಚಾಲ್ವುಲಾಗಲ್ಲೊ. ತನ್ನಾ ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಚಿಕ್ಕಿಯಾಂಚ್ಯಾ ವಿಶಯಾತ್ ಶಿಕಲ್ಲಿ ಬುದ್ವಂತ್ ಲೊಕಾ ಜೆರುಜಲೆಮಾಕ್ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:1
25 ತಿಳಿವುಗಳ ಹೋಲಿಕೆ  

ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ಇನ್ನೂ ಕೆಲವರು - ಕ್ರಿಸ್ತನು ಗಲಿಲಾಯದಿಂದ ಬರುವದು ಹೇಗೆ? ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬದಾಗಿ ಶಾಸ್ತ್ರದಲ್ಲಿ ಉಂಟಲ್ಲವೇ ಎಂದು ಹೇಳಿದರು.


ಅದೇನಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಅವರು ಅವನಿಗೆ - ಯೂದಾಯದ ಬೇತ್ಲೆಹೇವಿುನಲ್ಲಿಯೇ; ಯಾಕಂದರೆ -


ಆದರೆ ಆಕೆಯು ಗಂಡುಮಗನನ್ನು ಹಡೆಯುವ ತನಕ ಆಕೆಯನ್ನು ಅರಿಯಲಿಲ್ಲ. ಮಗುವಿಗೆ ಯೇಸುವೆಂದು ಹೆಸರಿಟ್ಟನು.


ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು - ನಾವು ಈಗಲೇ ಬೇತ್ಲೆಹೇವಿುಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡೋಣ ನಡೆಯಿರಿ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು ತಟ್ಟನೆ ಹೋಗಿ


ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳು. ಆಕೆಯ ಹೆಸರು ಎಲಿಸಬೇತ್.


ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ವಿುಗಿಲಾದದ್ದು.


ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿದನು.


ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು -


ಇದನ್ನು ಕೇಳಿ ಅರಸನಾದ ಹೆರೋದನೂ ಅವನ ಕೂಡ ಯೆರೂಸಲೇವಿುನವರೆಲ್ಲರೂ ಕಳವಳಪಟ್ಟರು.


ಇವರ ನಿವಾಸವು ಮೇಶಾಸೀಮೆ ಮೊದಲುಗೊಂಡು ಮೂಡಲಲ್ಲಿರುವ ಸೆಫಾರ್ ಎಂಬ ಬೆಟ್ಟದವರೆಗೂ ಇತ್ತು.


ಅವನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಐನೂರು ಜೋಡಿ ಎತ್ತುಗಳೂ ಐನೂರು ಹೆಣ್ಣು ಕತ್ತೆಗಳೂ ಅನೇಕಾನೇಕ ಸೇವಕರೂ ಇದ್ದದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವಾಸ್ತ್ಯವುಳ್ಳವನಾಗಿದ್ದನು.


ಬೆಳಿಗ್ಗೆ ಅವನು ಮನದಲ್ಲಿ ಕಳವಳಗೊಂಡು ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ ವಿದ್ವಾಂಸರನ್ನೂ ಕರಸಿ ಅವರಿಗೆ ತನ್ನ ಕನಸನ್ನು ತಿಳಿಸಲಾಗಿ ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಅವರಲ್ಲಿ ಒಬ್ಬರೂ ಸಿಕ್ಕಲಿಲ್ಲ.


ಯೆಹೂದದ ಬೇತ್ಲೆಹೇವಿುನವನೂ ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿಯು


ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜೋಯಿಸರನ್ನು ಕರೆಸಿ ಆ ನಕ್ಷತ್ರವು ಕಾಣಿಸಿದ ಕಾಲವನ್ನು ಅವರ ಕಡೆಯಿಂದ ಚೆನ್ನಾಗಿ ತಿಳುಕೊಂಡು -


ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಬೇತ್ಗಾದೇರಿನವರ ಮೂಲಪುರುಷನಾದ ಹಾರೇಫ್ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು