ಮತ್ತಾಯ 2:16 - ಕನ್ನಡ ಸತ್ಯವೇದವು J.V. (BSI)16 ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತ್ಯಾ ಭೆಟುಕ್ ಯೆಲ್ಲ್ಯಾನಿ ಅಪ್ನಾಕ್ ಪಸ್ವುಲ್ಯಾನಿ ಮನುನ್ ಹೆರೊದಾಕ್ ಕಳ್ಳೆ, ತನ್ನಾ ಹೆರೊದ್ ರಾಜಾಕ್ ಕಡ್ಕಡುನ್ ರಾಗ್ ಯೆಲೊ ತ್ಯಾ ಭೆಟುಕ್ ಯೆಲ್ಲ್ಯಾನಿಕ್ನಾ ಆಯ್ಕುನ್ ಘೆಟಲ್ಲ್ಯಾ ಎಳಾಚೊ ಅಂದಾಜ್ ಕರುನ್ ಘೆವ್ನ್ ಬೆತ್ಲೆಹೆಮಾತ್ ಅನಿ ಭೊತ್ಯಾನಿ ಹೊತ್ತ್ಯಾ ಗಾವಾನಿತ್ಲ್ಯಾ ದೊನ್ ವರ್ಸಾಚ್ಯಾ ಭುತ್ತುರ್‍ಲ್ಯಾ ಝಿಲ್ ಪೊರಾಕ್ನಿ ಜಿವಾನಿ ಮಾರಾ ಮನುನ್ ಅಪ್ನಾಚ್ಯಾ ಸೈನಿಕಾಕ್ನಿ ಧಾಡುನ್ ದಿಲ್ಯಾನ್. ಅನಿ ತೆನಿ ಸಗ್ಳ್ಯಾ ಪೊರಾಕ್ನಿ ಜಿವಾನಿ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |