Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:20 - ಕನ್ನಡ ಸತ್ಯವೇದವು J.V. (BSI)

20 ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್‍ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತುಹೋದರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಏಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಹಿಂದಿರುಗು; ಮಗುವನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋದರು,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವದೂತನು ಅವನಿಗೆ, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಇಸ್ರೇಲಿಗೆ ಹೋಗು. ಮಗುವನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದವರು ಸತ್ತುಹೋದರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹಿಂದಿರುಗು, ಮಗುವಿನ ಪ್ರಾಣ ತೆಗೆಯಬೇಕೆಂದಿದ್ದವರು ಸತ್ತುಹೋದರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅನಿ, “ಉಟ್ ಅನಿ ಬಾಳ್ಶ್ಯಾಕ್ ಅನಿ ಅವ್ಸಿಕ್ ಘೆವ್ನ್ ಇಸ್ರಾಯೆಲ್ ದೆಶಾಕ್ ಜಾ, ಪೊರಾಚೊ ಜಿವ್ ಕಾಡುಕ್ ಮನುನ್ ಹುಡಕ್ತಲಿ ಲೊಕಾ ಅತ್ತಾ ಮರುನ್ ಗೆಲಿ.” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:20
8 ತಿಳಿವುಗಳ ಹೋಲಿಕೆ  

ವಿುದ್ಯಾನ್‍ದೇಶದಲ್ಲಿ ಯೆಹೋವನು ಮೋಶೆಗೆ - ನೀನು ಐಗುಪ್ತದೇಶಕ್ಕೆ ತಿರಿಗಿ ಹೋಗು; ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದು ಹೇಳಿದ್ದರಿಂದ


ಅವರು ಹೋದ ಮೇಲೆ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು - ನೀನು ಎದ್ದು ಈ ಕೂಸನ್ನೂ ಇದರ ತಾಯಿಯನ್ನೂ ಕರಕೊಂಡು ಐಗುಪ್ತದೇಶಕ್ಕೆ ಓಡಿಹೋಗಿ ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು ಅಂದನು.


ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು ಐಗುಪ್ತದ ಅರಸನಾದ ಶೀಶಕನ ಬಳಿಗೆ ಹೋಗಿ ಸೊಲೊಮೋನನು ಜೀವದಿಂದಿರುವವರೆಗೆ ಅಲ್ಲಿಯೇ ಇದ್ದನು.


ದಾವೀದನು ಪಿತೃಗಳ ಬಳಿಗೆ ಸೇರಿದನೆಂದೂ ಸೇನಾಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನಿಗೆ - ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ; ನನಗೆ ಅಪ್ಪಣೆಕೊಡು ಅಂದನು.


ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು -


ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್‍ದೇಶಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು