Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:22 - ಕನ್ನಡ ಸತ್ಯವೇದವು J.V. (BSI)

22 ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೆ ಹೆರೋದನ ಮಗ ಅರ್ಖೆಲಾಯನು ತಂದೆಯ ಬದಲಿಗೆ ಜುದೇಯ ಪ್ರಾಂತ್ಯವನ್ನು ಆಳುತ್ತಿದ್ದಾನೆಂದು ಕೇಳಿ ಜೋಸೆಫನು ಅಲ್ಲಿಗೆ ಹೋಗಲು ಅಂಜಿದನು. ಕನಸಿನಲ್ಲಿ ತಾನು ಪಡೆದ ಆದೇಶದ ಪ್ರಕಾರ ಗಲಿಲೇಯ ಪ್ರಾಂತ್ಯಕ್ಕೆ ತೆರಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಹೆರೋದನು ಸತ್ತನಂತರ ಅವನ ಮಗನಾದ ಅರ್ಖೆಲಾಯನು ಜುದೇಯದ ರಾಜನಾಗಿದ್ದಾನೆ ಎಂಬುದನ್ನು ಕೇಳಿ ಅಲ್ಲಿಗೆ ಹೋಗಲು ಭಯಪಟ್ಟನು. ಕನಸಿನಲ್ಲಿ ತನಗೆ ಕೊಟ್ಟ ಎಚ್ಚರಿಕೆಯಂತೆ ಅವನು ಆ ಸ್ಥಳವನ್ನು ಬಿಟ್ಟು ಗಲಿಲಾಯ ಪ್ರದೇಶಕ್ಕೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಹೆರೋದನ ಮಗ ಅರ್ಖೆಲಾಯನು, ತಂದೆಯ ಬದಲಾಗಿ ಯೂದಾಯ ಪ್ರಾಂತವನ್ನು ಆಳುತ್ತಿದ್ದಾನೆಂದು ಕೇಳಿ, ಅಲ್ಲಿಗೆ ಹೋಗಲು ಭಯಪಟ್ಟನು. ಆಗ ಕನಸಿನಲ್ಲಿ ಹೊಂದಿದ ಎಚ್ಚರಿಕೆಯ ಪ್ರಕಾರ ಯೋಸೇಫನು ಗಲಿಲಾಯ ಪ್ರಾಂತಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ಹೆರೊದಾಚ್ಯಾ ಜಾಗ್ಯಾರ್ ತೆಚೊ ಲೆಕ್ ಅರ್‍ಖೆಲಾವ್ ಜುದೆಯಾಚೊ ರಾಜಾ ಹೊಲಾ ಮನುನ್ ಆಯ್ಕುನ್ ಜುಜೆ ಬೆತ್ಲೆಹೆಮಾಕ್ ಜಾವ್ಕ್ ಭಿಂಯಾಲೊ, ಅನಿ ಸಪ್ನಾತ್ ತೆಕಾ ಸಾಂಗಲ್ಲ್ಯಾ ಸರ್ಕೆ ಗಾಲಿಲಿಯಾ ಪ್ರಾಂತ್ಯಾಕ್ ತೊ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:22
18 ತಿಳಿವುಗಳ ಹೋಲಿಕೆ  

ಇತ್ತಲಾಗಿ ಅವರು ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.


ಅವರು - ನೀನೂ ಗಲಿಲಾಯದವನೋ? ಗಲಿಲಾಯದಲ್ಲಿ ಪ್ರವಾದಿ ಹುಟ್ಟುವದೇ ಇಲ್ಲ, ವಿಚಾರಿಸಿ ನೋಡು ಅಂದರು.


ಆ ಕಾಲದಲ್ಲಿ ಯೇಸು ಯೋಹಾನನಿಂದ ಸ್ನಾನಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್‍ಹೊಳೆಗೆ ಬಂದನು.


ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು -


ಅವನು ಇದನ್ನು ಆಲೋಚಿಸುತ್ತಿರುವಾಗ ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು - ಎಲೈ ಯೋಸೇಫನೇ, ದಾವೀದನ ವಂಶದವನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳುವದಕ್ಕೆ ಅಂಜಬೇಡ. ಆಕೆಯ ಗರ್ಭವು ಪವಿತ್ರಾತ್ಮದಿಂದಲೇ ಆದದ್ದು.


ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.


ನೀನು ಹೋಗುವಾಗಲೂ ಬರುವಾಗಲೂ ಇಂದಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.


ನಿನ್ನ ಚಿತ್ತವನ್ನು ತಿಳಿಯಪಡಿಸಿ ನನ್ನನ್ನು ನಡಿಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.


ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ - ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡಿಸುವವನಾಗಿದ್ದಾನೆ ಎಂದು ತಿಳಿಸುವಿರಿ.


ಅದಕ್ಕೆ ಸಮುವೇಲನು - ನಾನು ಹೋಗುವದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ ಅನ್ನಲು ಆತನು - ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕೆ ಕರೆ.


ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು -


ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್‍ದೇಶಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು