Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:12 - ಕನ್ನಡ ಸತ್ಯವೇದವು J.V. (BSI)

12 ಕಡೆಗೆ ಬಂದ ಇವರು ಒಂದು ತಾಸು ಹೊತ್ತು ಮಾತ್ರ ಕೆಲಸ ಮಾಡಿದ್ದಾರೆ; ನಾವು ದಿನವೆಲ್ಲಾ ಬಿಸಲಿನಲ್ಲಿ ಕೆಲಸ ಮಾಡಿ ಕಷ್ಟಪಟ್ಟಿದ್ದೇವೆ; ಇವರನ್ನು ನಮಗೆ ಸಮಮಾಡಿದ್ದೀಯೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ‘ಕೊನೆಗೆ ಗೊತ್ತುಮಾಡಲ್ಪಟ್ಟ ಆಳುಗಳು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಇವನು ಅವರಿಗೂ ನಮ್ಮಷ್ಟೇ ಕೊಟ್ಟಿದ್ದಾನೆ. ನಾವಾದರೋ ದಿನವೆಲ್ಲಾ ಬಿಸಿಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ‘ಕಡೆಯವರಾದ ಇವರು ಒಂದೇ ತಾಸು ಕೆಲಸಮಾಡಿದ್ದಾರೆ, ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸಮಾಡಿದ ನಮ್ಮನ್ನು ನೀನು ಇವರಿಗೆ ಸಮಮಾಡಿದ್ದಿ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ಅಮಿ ಸಕ್ಕಾಳ್ಚ್ಯಾನ್ ನಿಂಬ್ರಾತ್ ಅನಿ ಗರ್‍ಮಿತ್ ಕಾಮ್ ಕರ್ಲಾಂವ್, ಅನಿ ಹೆನಿ ಖಾಲಿ ಎಕುಚ್ ಎಕ್ ತಾಸ್ ಕಾಮ್ ಕರ್‍ಲ್ಯಾನಾತ್ ತೆಕಾಬಿ ಅಮ್ಕಾಬಿ ತವ್ಡಿಚ್ ಮಜುರಿ ದಿಲೆ”. ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:12
20 ತಿಳಿವುಗಳ ಹೋಲಿಕೆ  

ದಕ್ಷಿಣ ದಿಕ್ಕಿನ ಗಾಳಿ ಬೀಸಲಾಗಿ ಸೆಕೆ ಹುಟ್ಟುವದು ಅನ್ನುತ್ತೀರಿ; ಅದೂ ಆಗುತ್ತದೆ.


ಸೂರ್ಯನು ಉದಯಿಸಿ ಉಷ್ಣವಾದ ಗಾಳಿ ಬೀಸಿ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ಕೆಡುವದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುವನು.


ಅದು ಯಾವದಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹದೊಳಗಣ ಅಂಗಗಳೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬದೇ.


ಈ ಗಳಿಗೆಯವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ಮೈಗೆ ವಸ್ತ್ರವಿಲ್ಲದವರೂ ಗುದ್ದು ತಿನ್ನುವವರೂ


ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವದಕ್ಕೆ ಅವರ ನಂಬಿಕೆಯೇ ಆಧಾರ; ಸುನ್ನತಿಯಿಲ್ಲದವರನ್ನೂ ಹಾಗೆಯೇ ನಿರ್ಣಯಿಸುವದಕ್ಕೆ ನಂಬಿಕೆಯೇ ಕಾರಣ.


ಹಾಗಾದರೆ ಹೊಗಳಿಕೊಳ್ಳುವದಕ್ಕೆ ಆಸ್ಪದವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಪ್ರಮಾಣದಿಂದ? ಕರ್ಮಮಾರ್ಗವನ್ನು ಅನುಸರಿಸುವದರಿಂದಲೋ? ಅಲ್ಲ; ವಿಶ್ವಾಸ ಮಾರ್ಗವನ್ನು ಅನುಸರಿಸುವದರಿಂದಲೇ.


ನೀವು - ದೇವರನ್ನು ಸೇವಿಸುವದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದರಿಂದ ಆದ ಲಾಭವೇನು;


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, [ಈ ಸೇವೆಯು] ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ಛೀಗುಟ್ಟುತ್ತೀರಿ; ಕಳವಿನ ಪಶುವನ್ನೂ ಕುಂಟಾದದ್ದನ್ನೂ ರೋಗಿಯಾದದ್ದನ್ನೂ ತಂದೊಪ್ಪಿಸುತ್ತೀರಿ; ಇಂಥ ನೈವೇದ್ಯವನ್ನು ತಂದೊಪ್ಪಿಸುತ್ತಿರುವಲ್ಲಿ ನಾನು ಅದನ್ನು ನಿಮ್ಮ ಕೈಯಿಂದ ಸ್ವೀಕರಿಸಲೋ; ಇದು ಯೆಹೋವನ ನುಡಿ.


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ಅದನ್ನು ತೆಗೆದುಕೊಂಡು ಮನೆಯ ಯಜಮಾನನ ಮೇಲೆ ಗುಣುಗುಟ್ಟಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು